×
Home About Us Advertise With s Contact Us

ಎ.9ರಿಂದ ಮೋದಿ ವಿದೇಶ ಪ್ರವಾಸ

modiನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್.9ರಿಂದ ಎಂಟು ದಿನಗಳ ಕಾಲ ವಿದೇಶಿ ಪ್ರವಾಸಕೈಗೊಳ್ಳಲಿದ್ದಾರೆ. ಈ ಬಾರಿ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ಎಪ್ರಿಲ್ 9ರಿಂದ 16ರವರೆಗೆ ಅವರು 3 ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಸೈಯದ್ ಅಕ್ಬರುದ್ದೀನ್ ಮಾಹಿತಿ ನೀಡಿದ್ದಾರೆ.

ಕೆನಡಾದ ಟೊರೆಂಟೋದಲ್ಲಿ ಮೋದಿಗಾಗಿ ಬೃಹತ್ ಕಾರ್ಯಕ್ರಮ ಏರ್ಪಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಫ್ರಾನ್ಸ್ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್, ಜರ್ಮನಿಯ ಚಾನ್ಸ್‌ಲೆರ್ ಏಂಜೆಲಾ ಮಾರ್ಕೆಲ್ ಮತ್ತು ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪೆರ್ ಅವರನ್ನು ಮೋದಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

 

Recent News

Pungava 01-10-2018
23 hours ago  
Back To Top
error: Content is protected !!