ಹೈದರಾಬಾದ್: ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳನ್ನು ಕದ್ದುಕೊಂಡು ಹೋಗಿ ಅಮಾನವೀಯವಾಗಿ ವಧಿಸುವವರಿಗೆ ತೆಲಂಗಾಣದಲ್ಲಿ ಕಠಿಣ ಶಿಕ್ಷೆ ಕಾದಿದೆ.
ಈ ಕುರಿತು ತೆಲಂಗಾಣ ಸರ್ಕಾರದ ಪಶುಸಂಗೋಪನಾ ಇಲಾಖೆಯು ಪ್ರಾಣಿ ಸಂರಕ್ಷಣೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಬಗ್ಗೆ ಸೂಚನಾಪತ್ರ ಹೊರಡಿಸಿದೆ.
ಸೂಚನಾಪತ್ರದಲ್ಲಿ, ‘ಯಾರೇ ಆಗಲಿ ಗೋವುಗಳನ್ನು ಕದ್ದೊಯ್ಯುವುದು, ಹಿಂಸಿಸುವುದು ಅಥವಾ ಅವುಗಳನ್ನು ವಧಿಸುವುದು ಮಾಡಿದಲ್ಲಿ ಕಾನೂನಿನ ಪ್ರಕಾರ ಅವರಿಗೆ ಶಿಕ್ಷೆ ವಿಧಿಸಲಾಗುವುದು’ ಎಂದು ಹೇಳಲಾಗಿದೆ.
ಇಂಥಹ ಹೀನ ಕೃತ್ಯ ಎಸಗುವವರ ಕುರಿತು ಪೊಲೀಸರು, ಕಂದಾಯ ಮತ್ತು ಸಾರಿಗೆ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ರಾಜ್ಯ ಪಶುಸಂಗೋಪನಾ ಇಲಾಖೆಯು ಈ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬಕ್ರೀದ್ ಸಮಯದಲ್ಲಿ ಅತಿ ಹೆಚ್ಚು ಮಾಂಸ ಸೇವನೆ, ಬಳಕೆ ಮಾಡುವುದರಿಂದ ಇಂತಹ ಕೃತ್ಯಗಳು ಸಂಭವಿಸಬಹುದು ಎಂಬ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದನ್ನು ಉಲ್ಲಂಘಿಸುವವರಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆಯ ನಿರ್ದೇಶಕ ಡಿ. ವೆಂಕಟೇಶ್ವರಲು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.