ಜಮ್ಮು : ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಮುಂದುವರಿಯುತ್ತಿದ್ದು. ಅಲ್ಲಿ ಶಾಂತಿ ಕಾಪಾಡಲು ಸೇನೆಗೆ ಒಂದು ವಾರದ ಗಡುವು ನೀಡಲಾಗಿದೆ.
ಇಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ತಮ್ಮ ನಿವಾಸದಸಲ್ಲಿ ಭಾರತೀಯ ಸೇನೆಯ ಉನ್ನತ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿರುವವರ ಬೆನ್ನಟ್ಟಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಭದ್ರತಾ ಸಿಬ್ಬಂದಿಗಳು ಹಿಂಸಾಚಾರ ಆರಂಭವಾಗುವುದಕ್ಕೂ ಮುನ್ನ ಎಚ್ಚರ ವಹಿಸಬೇಕು. ಶಾಂತಿ ಧಕ್ಕೆಯುಂಟು ಮಾಡುವ ಜನರ ವಿರುದ್ಧ ಜಾಗರೂಕರಾಗಿರಬೇಕು. ಒಂದು ವಾರದೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮರುಕಳಿಸುವಂತೆ ಪ್ರಯತ್ನಿಸಿ ಎಂದು ಭದ್ರತಾ ಸಿಬ್ಬಂದಿಗಳಿಗೆ ಗಡುವು ನೀಡಿದ್ದಾರೆ.
ಹಿಂಸಾಚಾರದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಶಾಂತಿಯುತ ವಾತಾವರಣ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ಭದ್ರತಾ ಸಿಬ್ಬಂದಿಗಳು ಒಂದು ವಾರದೊಳಗೆ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 8 ರಂದು ಹಿಜ್ಬುಲ್ ಉಗ್ರಸಂಘಟನೆಯ ಮುಖಂಡ ಬುರ್ಹಾನ್ ವಾನಿ ಹತ್ಯೆಯ ಬಳಿಕ ಪ್ರಾರಂಭವಾಗಿರುವ ಹಿಂಸಾಚಾರ ಸುಮಾರು 65 ದಿನಗಳಾಗಿವೆ. ಈಗಾಗಲೇ 75 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇನ್ನೂ ಹಿಂಸಾಚಾರ ನಡೆಯುತ್ತಲೇ ಇದೆ. ಪ್ರತಿಭಟನೆ, ಹಿಂಸಾಚಾರ, ಈತನ್ಮಧ್ಯೆ ಉಗ್ರರ ಒಳನುಸುಳುವಿಕೆ, ಇವೆಲ್ಲವನ್ನೂ ಹತ್ತಿಕ್ಕಲು ಭದ್ರತಾ ಸಿಬ್ಬಂದಿಗಳು ಸತತ ಕಾರ್ಯಾಚರಣೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.