ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಸೋಮವಾರ ಬೆಂಗಳೂರಿನಲ್ಲಿ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡೆದ ಪರಿಣಾಮ ಸಚಿವ ಸಂಪುಟದ ತುರ್ತು ಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಆದರೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದರೆ ಕೋರ್ಟ್ ಆದೇಶ ಉಲ್ಲಂಘಿಸಿದಂತಾಗುತ್ತದೆ. ಇದರಿಂದ ನ್ಯಾಯಾಂಗ ನಿಂದನೆ ಕೇಳಿಬರುವ ಸಾಧ್ಯತೆ ಇದೆ. ಆದ್ದರಿಂದ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿ ಯಥಾಸ್ಥಿತಿ ಕಾಯ್ದುಕೊಳ್ಳಲು ತೀರ್ಮಾನಿ ಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಲಾಗಿದ್ದು, ಪ್ರಧಾನಿ ಮೋದಿ ಅವರ ಭೇಟಿಗೆ ಪ್ರಧಾನಿ ಕಚೇರಿ ಸೆಪ್ಟೆಂಬರ್ 14ರಂದು ಸಮಯ ನಿಗದಿ ಮಾಡಿದೆ. ಪ್ರಧಾನಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.