ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ಸೇವಾ ದಿವಸ್’ ಆಗಿ ಆಚರಿಸುವಂತೆ ಜನರಿಗೆ ಸಂದೇಶ ನೀಡಿದ್ದಾರೆ. ಈ ಸಂದರ್ಭ ತೆಲಂಗಾಣದಲ್ಲಿ ಒಂದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಅವರು ಘೋಷಿಸಿದ್ದಾರೆ.
ಪ್ರಧಾನಿ ಮೋದಿ ಅವರ ಜನ್ಮದಿನವನ್ನು ನಾವು ‘ಸೇವಾ ದಿವಸ್’ ಆಗಿ ಆಚರಿಸೋಣ. ದೇಶದಾದ್ಯಂತ ಪಕ್ಷದ ಲಕ್ಷಾಂತರ ಕಾರ್ಯಕರ್ತರು ಸಾಮಾಜಿಕ ಸೇವೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿರುವುದು ಸಂತೋಷದ ಸಂಗತಿ. ಪಕ್ಷದ ಓರ್ವ ಕಾರ್ಯಕರ್ತನಾಗಿ ನಾನು ತೆಲಂಗಾಣದಲ್ಲಿ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕ ಸೇವೆಗಿಂತಲೂ ಹೆಚ್ಚು ತೃಪ್ತಿದಾಯಕ ಸೇವೆ ಬೇರೆ ಯಾವುದೂ ಇಲ್ಲ. ದೇಶದ ಅಭಿವೃದ್ಧಿ ಬಡ ಜನರಿಗೆ ಹೆಚ್ಚಿನ ಪ್ರಯೋಜನ ನೀಡಲಿದೆ ಎಂಬ ಪ್ರಧಾನಿ ಮೋದಿ ಅವರ ಮಾತು ನಿಜ. ಇದು ‘ಅಂತ್ಯೋದಯ’ದ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.