ನವದೆಹಲಿ: ತಮಿಳುನಾಡಿಗೆ ಸೆಪ್ಟೆಂಬರ್ 21ರಿಂದ 30ರ ವರೆಗೆ 3000 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ (ಸಿಎಂಸಿ) ಆದೇಶಿಸಿದೆ.
ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಕಾರ್ಯದರ್ಶಿ ಶಶಿ ಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ಮೇಲುಸ್ತುವಾರಿ ಸಭೆಯಲ್ಲಿ ಕರ್ನಾಟಕ ಈ ತಿಂಗಳ ಅಂತ್ಯದವರೆಗೆ ತಮಿಳುನಾಡಿಗೆ 3000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡಿಗೆ ಯಾವೂದೇ ಕಾರಣಕ್ಕೂ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ವಾದಿಸಿದ್ದರು. ಇದನ್ನು ವಿರೋಧಿಸಿದ ಸಿಎಂಸಿ, ತ.ನಾಡಿಗೆ ನೀರು ಬಿಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶಿಸಿದೆ.
ಎರಡು ವಾರಗಳ ಹಿಂದೆ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಸೆ.20ರ ವರೆಗೆ 15,000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿತ್ತು. ಇದರ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯೂ ನಡೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.