ಕೋಲ್ಕತಾ: ಬಂಗಾಳಿ ಹಾಡುಗಳಿಗೆ ತಮ್ಮ ಕೊಡುಗೆಯನ್ನು ಪರಿಗಣಿಸಿ ಭಾರತದ ಲೆಜೆಂಡರಿ ಗಾಯಕಿ ಲತಾ ಮಂಜೇಶ್ಕರ್ ಅವರಿಗೆ ಪಶ್ಚಿಮ ಬಂಗಾಳ ಸರ್ಕಾರ ‘ಬಂಗಾಬಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಲತಾ ಮಂಗೇಶ್ಕರ್ ಅವರು ಹಲವಾರು ಸ್ಮರಣೀಯ ಬಂಗಾಳಿ ಹಾಡುಗಳನ್ನು ಹಾಡಿದ್ದಾರೆ. ಅವರ ಈ ಕೊಡುಗೆಗಾಗಿ ಅವರನ್ನು ಗೌರವಿಸಲು ಈ ವರ್ಷ ಬಂಗಾಬಿಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದೇವೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
ದುರ್ಗಾ ಪೂಜಾ ಕಾರ್ಯಕ್ರಮದ ನಂತರ ಲತಾ ಮಂಗೇಶ್ಕರ್ ಅವರ ಮುಂಬಯಿ ನಿವಾಸಕ್ಕೆ ವೈಯಕ್ತಿಕವಾಗಿ ಭೇಟಿ ನೀಡಿ ಪ್ರಶಸ್ತಿ ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಈ ವೇಳೆ ತಿಳಿಸಿದ್ದಾರೆ.
2011ರಲ್ಲಿ ಪಶ್ಚಿಮ ಬಂಗಾಳ ಸರ್ಕಾರ ನೃತ್ಯಗಾರ್ತಿ ಅಮಲಾ ಶಂಕರ್, ಸರೋದ್ ವಾದಕ ಅಂಜಾದ್ ಅಲಿ ಖಾನ್, ಗಾಯಕ ಮನ್ನಾ ಡೇ, ಲೇಖಕಿ ಮಹಾಶ್ವೇತಾ ದೇವಿ, ಬರಹಗಾರ ಶೀರ್ಷೇಂದು ಮುಖೋಪಾಧ್ಯಾಯ್, ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತಿತರರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.