ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಅಂತಿಮ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ನೀರು ಬಿಡುಗಡೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ನಿರ್ಧರಿಸಲಾಗಿದೆ.
ತಮಿಳುನಾಡಿಗೆ ಸೆಪ್ಟೆಂಬರ್ 27 ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸುಪ್ರೀಂ ಆದೇಶಿಸಿದ್ದು, ಈ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಸಭೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರುಗಳು ಹಾಜರಿದ್ದು, ಬಿಜೆಪಿ ಗೈರಾಗಿತ್ತು.
ರಾಜ್ಯದಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಎಲ್ಲ ನಾಯಕರುಗಳು ಸರ್ವಪಕ್ಷ ಸಭೆಯಲ್ಲಿ ಹೇಳಿದ ಕಾರಣ, ನೀರು ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ.ಉದಯ್ ಯು.ಲಲಿತ್ ಅವರಿದ್ದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಕೇಂದ್ರ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿದೆ. ಆದರೆ ಮಂಡಳಿ ರಚಿಸಿ ಎಂದು ವಿಭಾಗೀಯ ಪೀಠ ಆದೇಶಿಸುವುದು ಕಾನೂನು ಬಾಹಿರ ಎಂದು ಹಲವು ತಜ್ಞರ ನಿಲುವಾಗಿದೆ.
ವಿಧಾನಮಂಡಲದ ಒಂದು ದಿನದ ವಿಶೇಷ ಅಧಿವೇಶನ ಕರೆಯುವ ನಿರ್ಣಯವನ್ನು ಸರಕಾರ ಕೈಗೊಂಡಿದ್ದು, ದಿನವಿನ್ನೂ ಖಚಿತವಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.