ಮುಂಬೈ : ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರ ಒಯ್ಯುವುದನ್ನು ತಾವು ಕಂಡಿರುವುದಾಗಿ ಶಾಲಾ ಮಕ್ಕಳಿಬ್ಬರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬಯಿ ಪೊಲೀಸರು ಶಾಲಾ ಮಕ್ಕಳು ನೀಡಿದ ಮಾಹಿತಿ ಮೇರೆಗೆ ರೇಖಾಚಿತ್ರ ತಜ್ಞರಿಂದ ಚಿತ್ರ ಬಿಡಿಸಲಾಗಿದ್ದು, ಶಂಕಿತ ಉಗ್ರನ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ.
ಶಂಕಿತ ಉಗ್ರನ ರೇಖಾಚಿತ್ರವನ್ನು ಎಲ್ಲಾ ಪೊಲೀಸ್ ಠಾಣೆಗಳಿಗೆ ರವಾನಿಸಲಾಗಿದೆ.
ಮುಂಬೈ ಕರಾವಳಿ ತೀರದಲ್ಲಿರುವ ನೌಕಾ ಶಸ್ತ್ರಾಸ್ತ್ರ ಸಂಗ್ರಹಾಗಾರ “ಐಎನ್ಎಸ್ ಅಭಿಮನ್ಯು” ಘಟಕಕ್ಕೆ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ಮುಂಬೈ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಉರಾನ್ ನೌಕಾ ನೆಲೆಗೆ ಸಾಗರ ಭದ್ರತಾ ಪಡೆಯ ಮಾರ್ಕೋಸ್ ಕಮಾಂಡೋಗಳನ್ನು ಕಳುಹಿಸಲಾಗಿದ್ದು, ಮುಂಬೈ ಪೊಲೀಸರು ನಗರದಾದ್ಯಂತ ನಾಕಾಬಂದಿ ಜಾರಿಗೊಳಿಸಿ ಪರಿಸ್ಥಿತಿಯನ್ನು ಕಟ್ಟೆಚ್ಚರದಿಂದ ನಿರ್ವಹಿಸುತ್ತಿದ್ದು, ಕೊಲಾಬಾ ಪೊಲೀಸ್ ದಳ, ಎನ್ಎಸ್ಜಿ ಕಮಾಂಡೋಗಳು ಕೂಡಾ ವ್ಯಾಪಕ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲವಾದರೂ, ಶಾಲಾ ಮಕ್ಕಳು ನೀಡಿರುವ ಮಾಹಿತಿಯನ್ನು ನಿರ್ಲಕ್ಷಿಸದೆ ಕಟ್ಟೆಚ್ಚರ ವಹಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಮುಂಬೈ ನಗರಿಗರು ಹೆದರುವುದು ಬೇಡ. ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಶಂಕೆ ಬಂದಲ್ಲಿ ವಿಚಾರಣೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.