ಸೂರತ್: ಉರಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಮಕ್ಕಳ ಶೈಕ್ಷಣಿಕ ಮತ್ತು ಇತರ ವೆಚ್ಚಗಳ ಪ್ರಾಯೋಜಕತ್ವ ನೀಡಲಿದೆ ಎಂದು ಸೂರತ್ನ ಪಿಪಿ ಸಾವನಿ ಗ್ರೂಪ್ ಘೋಷಿಸಿದೆ.
ಸಾವನಿ ಗ್ರೂಪ್ ರಿಯಲ್ಟಿ ವಲಯದಲ್ಲಿ ತೊಡಗಿಕೊಂಡಿದ್ದು, ಸರಣಿ ಶಾಲೆಗಳ ನಡೆಸುತ್ತಿದೆ.
ಉರಿ ದಾಳಿಯಲ್ಲಿ ಸುಮಾರು 18 ಯೋಧರು ಮೃತಪಟ್ಟಿದ್ದು, ಅವರ ಮಕ್ಕಳು ತಮ್ಮ ತಂದೆಯನ್ನು ಕಳೆದುಕೊಂಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ನಡೆಸುತ್ತಿರುವ ಯೋಧರ ಮಕ್ಕಳಿಗೆ ಶೈಕ್ಷಣಿಕ ಮತ್ತು ಇತರ ಅಗತ್ಯತೆಗಳ ಪ್ರಾಯೋಜಕತ್ವ ನೀಡಲು ನಾವು ಮುಂದಾಗಿದ್ದೇವೆ ಎಂದು ಲೋಕೋಪಕಾರಿ, ಸಾಮಾಜಿಕ ಕಾರ್ಯಕರ್ತ ಮಹೇಶ್ ಸಾವನಿ ಹೇಳಿದ್ದಾರೆ.
ಶಿಕ್ಷಣದ ಜೊತೆ ಪಿಪಿ ಸಾವನಿ ಅಂತಾರಾಷ್ಟ್ರೀಯ ಶಾಲೆಯಲ್ಲಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಾವನಿ ಹೇಳಿದ್ದಾರೆ.
ಪಿಪಿ ಸಾವನಿ ಗ್ರೂಪ್ ವಿದ್ಯಾರ್ಥಿನಿಯರಿಗೆ ಹಲವಾರು ವರ್ಷಗಳಿಂದ ಉಚಿತ ಶಿಕ್ಷಣ ಒದಗಿಸುತ್ತಾ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.