ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಈವರೆಗೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಂಧ್ರ ಮತ್ತು ತೆಲಂಗಾಣದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ ಸೇನೆಯ ಸಹಾಯವನ್ನು ಕೋರಿದ್ದಾರೆ.
ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ಇನ್ನಷ್ಟು ಮಳೆ ಸಂಭವಿಸುವ ಬಗ್ಗೆ ಮಾಹಿತಿ ನೀಡಿದ್ದು, ನಗರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಲಿಸಲಾಗಿದೆ.
ಎರಡೂ ರಾಜ್ಯ ಸರ್ಕಾರಗಳು ಶಾಲಾ-ಕಾಲೇಜುಗಳಿಗೆ 2 ದಿನಗಳ ರಜೆ ಘೋಷಿಸಿದ್ದು, ಐಟಿ ಕಂಪೆನಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ನಿರ್ವಹಿಸುವ ಅವಕಾಶವನ್ನು ಕಲ್ಪಿಸಲಾಗಿದೆ.
ಬೇಗಮ್ಪೇಟ್, ನಿಜಾಮ್ಪೇಟ್, ಅಲ್ವಾಲ್ಗಳಲ್ಲಿ ಕೆರೆಗಳು, ನದಿಗಳಿಂದ ನೀರು ಮೇಲ್ಮಟ್ಟದಲ್ಲಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಸೇನೆಯ ಸಹಾಯಹಸ್ತವನ್ನು ಕೋರಲಾಗಿದೆ ಎಂದು ಹೈದರಾಬಾದ್ ಮೇಯರ್ ಬಿ. ರಾಮ್ಮೋಹನ್ ಹೇಳಿದ್ದಾರೆ. ಇದೇ ವೇಳೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಸಂಪರ್ಕಿಸಲಾಗಿದೆ ಎಂದು ಹೈದರಾಬಾದ್ ಮಹಾನಗರಪಾಲಿಕೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.