ನವದೆಹಲಿ: ಗಂಗಾ ನದಿ ತೀರದಲ್ಲಿ ಶೌಚಾಲಯ ನಿರ್ಮಾಣ ಕಾರ್ಯಕ್ಕಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ 315 ಕೋಟಿ ರೂ. ಬಿಡುಗಡೆ ಮಾಡಿದೆ.
ಜಲ ಸಂಪನ್ಮೂಲ ಸಚಿವಾಲಯ 2016-17ನೇ ಸಾಲಿನಲ್ಲಿ ಸ್ವಚ್ಛ ಭಾರತ ಅಭಿಯಾನ (ಗ್ರಾಮೀಣ)ದ ಕ್ರಿಯಾಶೀಲ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯಕ್ಕೆ ಹಣವನ್ನು ಬಿಡುಗಡೆ ಮಾಡಿದೆ.
ಜಲ ಸಂಪನ್ಮೂಲ, ನದಿಗಳ ಅಭಿವೃದ್ಧಿ ಮತ್ತು ಗಂಗಾ ಸಚಿವಾಲಯ ಕಳೆದ ಆರ್ಥಿಕ ವರ್ಷದಲ್ಲಿ ಈ ಉದ್ದೇಶಕ್ಕಾಗಿ 263 ಕೋಟಿ ರೂ. ಬಿಡುಗಡೆ ಮಾಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೆ ಈ ಯೋಜನೆ ಅಡಿಯಲ್ಲಿ 14,500 ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.