ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ವಿಭಜನೆಗೊಂಡು ಹುಟ್ಟಿರುವ ಆಮ್ ಆದ್ಮಿ ಸೇನಾದ ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ಗಾಂಧೀ ಟೋಪಿ ಧರಿಸಿದ್ದ ಕಾರ್ಯಕರ್ತರು ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರಲ್ಲದೇ, ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮಹಿಳೆಯರ ರಕ್ಷಣೆಗೆ ಮಾರ್ಷಲ್ಗಳನ್ನು ನಿಯೋಜಿಸುವ, ಬಸ್ನಲ್ಲಿ ಸುರಕ್ಷತೆ ಒದಗಿಸುವ ಬಗ್ಗೆ ನೀಡಿದ್ದ ಭರವಸೆಗಳನ್ನು ಕೇಜ್ರಿವಾಲ್ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಎ.11ರಂದು ಆಮ್ ಆದ್ಮಿ ಸೇನಾ ಕಾರ್ಯಕರ್ತರು ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.