ಬೆಂಗಳೂರು: ಮೇಕೆದಾಟು ಯೋಜನೆಯ ಅಗತ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಎ.30ರಂದು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ತೆರಳಲಿದೆ.
ಸರ್ವಪಕ್ಷ ಭೇಟಿಗೆ ಅವಕಾಶ ಮಾಡಿಕೊಡುವಂತೆ ಸಿಎಂ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಕಾರ್ಯಾಲಯ ಗುರುವಾರ ಭೇಟಿಗೆ ಅವಕಾಶ ಕಲ್ಪಿಸಿದೆ.
ಕರ್ನಾಟಕಕ್ಕೆ ಮೇಕೆದಾಟು ಯೋಜನೆಯ ಅಗತ್ಯತೆಯ ಬಗ್ಗೆ ಮತ್ತು ತಮಿಳುನಾಡಿನ ಅನಗತ್ಯ ವಿರೋಧದ ಬಗ್ಗೆಯೂ ನಿಯೋಗ ಮೋದಿಗೆ ಮನವರಿಕೆ ಮಾಡಿಕೊಡಲಿದೆ ಎನ್ನಲಾಗಿದೆ.
ಮೇಕೆದಾಟು ಯೋಜನೆಗೆ ಅವಕಾಶ ಕಲ್ಪಿಸದಂತೆ ಈಗಾಗಲೇ ವಿಜಯಕಾಂತ್ ನೇತೃತ್ವದ ತಮಿಳುನಾಡಿನ ನಿಯೋಗ ಮೋದಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.