ನವದೆಹಲಿ : ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರು ‘ಸ್ವರಾಜ್ ಇಂಡಿಯಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ.
ಕಳೆದ ಏಪ್ರಿಲ್ನಲ್ಲಿ ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡ ನಂತರ ಸ್ವರಾಜ್ ಅಭಿಯಾನ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು. ಆದರೆ ಇದೀಗ ಸ್ವರಾಜ್ ಇಂಡಿಯಾ ಎಂಬ ನೂತನ ಪಕ್ಷವನ್ನು ಸ್ಥಾಪಿಸಿದ್ದಾರೆ.
ನೂತನ ಪಕ್ಷವು ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಮ್ಮ ಕಾರ್ಯಕರ್ತರು ತಮ್ಮ ಯಾವುದೇ ಅಭಿಪಪ್ರಾಯಗಳನ್ನು ಹಂಚಿಕೊಳ್ಳಲು ಸ್ವತಂತ್ರರಾಗಿದ್ದು, ಆಪ್ ಪಕ್ಷದಂತೆ ಅವರನ್ನು ಕಡೆಗಣಿಸುವುದಿಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳ ಸಮಸ್ಯೆಗಳ ನಿವಾರಣೆಗೆ ಪಕ್ಷವು ಹೋರಾಡಲಿದೆ. ಸ್ವರಾಜ್ ಅಭಿಯಾನ ಮತ್ತು ಸ್ವರಾಜ್ ಇಂಡಿಯಾ ಎರಡೂ ಅಸ್ತಿತ್ವದಲ್ಲಿರಲಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.