ನವದೆಹಲಿ: ತಾಂತ್ರಿಕ ಶಿಕ್ಷಣ ಮತ್ತು ಕೌಶಲ್ಯ ವೃದ್ಧಿ, ರಕ್ಷಣೆ ಹಾಗೂ ಭದ್ರತಾ ಸಹಕಾರ ಸೇರಿದಂತೆ ಮೂರು ಮಹತ್ವದ ಒಪ್ಪಂದಗಳಿಗೆ ಭಾರತ ಹಾಗೂ ಸಿಂಗಾಪುರ ಸಹಿ ಹಾಕಿವೆ. ಬಳಿಕ ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿಗೆ ಭೇಟಿ ನೀಡಿರುವ ಸಿಂಗಾಪುರ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನೊಳಗೊಂಡ ನಿಯೋಗ ಮಾತುಕತೆ ನಡೆಸಿದೆ.
ಎರಡು ದೇಶಗಳ ನಡುವೆ ಪಾಲುದಾರಿಕೆ ಅಭಿವೃದ್ಧಿಪಡಿಸುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತು ಕೈಗಾರಿಕಾ ಆಸ್ತಿ ಸಹಕಾರ ಸೇರಿ 3 ಒಪ್ಪಂದಗಳಿಗೆ ಇಬ್ಬರು ನಾಯಕರು ಸಾಕ್ಷಿಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣ ಮತ್ತು ತರಬೇತಿ ಸಹಯೋಗದೊಂದಿಗೆ ಸಿಂಗಾಪುರದ ತಾಂತ್ರಿಕ ಶಿಕ್ಷಣ ಸಂಸ್ಥೆ (ಐಟಿಇ) ಶಿಕ್ಷಣ ಸೇವೆಗಳು (ಟಿಇಇಎಸ್) ಮತ್ತು ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕಾರ್ಪೋರೇಷನ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದೇ ವೇಳೆ ಅಸ್ಸಾಂ ಸರ್ಕಾರ ಮತ್ತು ಐಟಿಇಇಎಸ್ ಸಿಂಗಾಪುರ ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣ ಮತ್ತು ತರಬೇತಿ ಸಹಯೋಗದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿವೆ.
ಕೈಗರಿಕೆ ಆಸ್ತಿ ಸಹಕಾರ ಕ್ಷೇತ್ರದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಮೂರನೇಯದಾಗಿ ರಕ್ಷಣೆ ಮತ್ತು ಭದ್ರತೆ ಒಪ್ಪಂದಕ್ಕೆ ಸಹಿ ಹಾಕಿವೆ.
ಸಿಂಗಾಪುರ ಪ್ರಧಾನಿ ಸೀನ್ ಲೂಂಗ್ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ 5 ದಿನಗಳ ದವಿಪಕ್ಷೀಯ ಭೇಟಿಯ ಭಾಗವಾಗಿ ಸೋಮವಾರ ಭಾರತಕ್ಕೆ ಆಗಮಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.