ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯು ಉಗ್ರರ ದಾಳಿ ನಡೆಯುವುದರ ಕುರಿತು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ದೇಶದ ಪ್ರಮುಖ 4 ರಾಜ್ಯಗಳು, ಮತ್ತು ದೆಹಲಿ ಸೇರಿದಂತೆ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ಮತ್ತು ಗಡಿ ರಾಜ್ಯಗಳಾದ ಪಂಜಾಬ್, ಗುಜರಾತ್, ರಾಜಸ್ಥಾನದ ವಿಮಾನ ನಿಲ್ದಾಣಗಳು ಸೇರಿದಂತೆ ದೆಹಲಿಯ ವಿಮಾನ ನಿಲ್ದಾಣಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಈಗಾಗಲೆ ನದಿ ಮತ್ತು ಕರಾವಳಿ ಮಾರ್ಗವಾಗಿ ಉಗ್ರರು ಭಾರತದೊಳಕ್ಕೆ ನುಸುಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಇದೀಗ ವಿಮಾನ ನಿಲ್ದಾಣಗಳಿಂದಲೂ ಉಗ್ರರು ಭಾರತದೊಳಕ್ಕೆ ನುಸುಳುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆ ಎಚ್ಚರಿಕೆಯನ್ಉ ನೀಡಿದೆ.
ಕೇಂದ್ರ ನಾಗರಿಕ ವಿಮಾನಯಾನ ಭದ್ರತಾ ದಳ ದೇಶದಾದ್ಯಂತ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಸೂಚನೆ ನೀಡಿದೆ. ಪ್ರಯಾಣಿಕರ ಲಗೇಜ್ಗಳನ್ನು ಸಂಪೂರ್ಣವಾಗಿ ಪರೀಕ್ಷಿಸಿ ಭದ್ರತಾ ಲೋಪವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಅರೆಸೇನಾ ಪಡೆಗಳು, ಬಿಎಸ್ಎಫ್ ಯೋಧರ ಪಡೆಗಳನ್ನು ನಿಯೋಜಿಸುವಂತೆ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.