ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಸಂಜೆ ಝುಕುರಾದಲ್ಲಿ ನಡೆದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, 8 ಯೋಧರಿಗೆ ಗಾಯಗಳಾಗಿವೆ.
ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ ನಂತರ 26 ದಿನಗಳಲ್ಲಿ 6 ನೇ ಬಾರಿ ಉಗ್ರರು ಮತ್ತೊಮ್ಮೆ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ತುಕಡಿಯ ಯೋಧರು ಶ್ರೀನಗರದಲ್ಲಿ ಭದ್ರತಾ ಕಾರ್ಯ ಮುಗಿಸಿಕೊಂಡು ತಮ್ಮ ಕ್ಯಾಂಪ್ಗಳಿಗೆ ಹಿಂದಿರುಗುತ್ತಿರುವ ಸಂದರ್ಭ ಝುಕಾರಾ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. 6 ಸೇನಾ ವಾಹನಗಳಲ್ಲಿ ಕೊನೆಯ ವಾಹನದಲ್ಲಿನ ಯೋಧರು ಗುಂಡಿನ ದಾಳಿಗೆ ತುತ್ತಾಗಿದ್ದಾರೆ. ಯೋಧರು ಪ್ರತಿ ದಾಳಿ ನಡೆಸಿದ ಕೂಡಲೇ ಉಗ್ರರು ಪರಾರಿಯಾಗಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡಿರುವ 8 ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಓರ್ವ ಪೊಲೀಸ್ ಕೂಡಾ ಇದ್ದಾರೆ. 8 ಯೋಧರ ಪೈಕಿ 3 ಯೋಧರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಉಗ್ರರು ಸ್ಥಳೀಯ ಮನೆಗಳಲ್ಲಿ ಆಶ್ರಯ ಪಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.