ಪಣಜಿ : ಗೋವಾದ ರಾಜಧಾನಿ ಪಣಜಿಯಲ್ಲಿ ಉದಯೋನ್ಮುಖ ಆರ್ಥಿಕ ಶಕ್ತಿಗಳ ಕೂಟವಾಗಿರುವ ‘ಬ್ರಿಕ್ಸ್’ ದೇಶಗಳ ಶೃಂಗಸಭೆಯು ಪ್ರಾರಂಭವಾಗಿದೆ.
ಬ್ರಿಕ್ಸ್ ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕ ಕ್ಷೇತ್ರ, ವ್ಯಾಪಾರ, ಕೈಗಾರಿಕೆ. ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆ ಸೇರಿದಂತೆ ಒಟ್ಟು 16 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಸುಮಾರು 398 ಸಾವಿರ ಕೋಟಿ ರೂ. ಮೌಲ್ಯದ 16 ಒಪ್ಪಂದಗಳಲ್ಲಿ ಪ್ರಮುಖವಾಗಿ ಶಿಕ್ಷಣ ಕ್ಷೇತ್ರ, ಭಾರತದಲ್ಲಿ ನೈಸರ್ಗಿಕ ಅನಿಲ ಉತ್ಪಾದನೆ, ರಕ್ಷಣಾ ಕ್ಷೇತ್ರದ ಯೋಜನೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ರಷ್ಯಾದ ಅತ್ಯಾಧುನಿಕ ಹೆಲಿಕಾಪ್ಟರ್ಗಳನ್ನು ಭಾರತದಲ್ಲಿ ನಿರ್ಮಿಸಲು ಒಪ್ಪಂದ ಹಾಗೂ ಭಾರತೀಯ ಸೇನೆಯ ಆಧುನೀಕರಣಕ್ಕೆ ನೆರವಾಗಬಲ್ಲ ರಷ್ಯಾದ ಕೆಲವು ಪ್ರಮುಖ ಕ್ಷಿಪಣಿಗಳನ್ನು ಪೂರೈಕೆ ಮಾಡುವ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಇದಲ್ಲದೆ ಕೂಡಂಕುಳಂ ಅಣುಸ್ಥಾವರ 2 ನೇ ಘಟಕ ನಿರ್ಮಾಣಕ ಹಾಗೂ ಭಾರತದ ರೈಲ್ವೇ ಕ್ಷೇತ್ರದಲ್ಲಿ ರಷ್ಯಾ ಬಂಡವಾಳ ಹೂಡುವ ಒಪ್ಪಂದಕ್ಕೂ ಸಹಿ ಹಾಕಲಾಗಿದೆ.
ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಷ್ಯಾದ ಪ್ರಬಲ ಯುದ್ಧ ಹೆಲಿಕಾಪ್ಟರ್ ಕಮಾವ್ 226ಟಿ ಹೆಲಿಕಾಪ್ಟರ್ನ್ನು ತಯಾರಿಸಲಾಗುವುದು. ಸುಮಾರು 200 ಹೆಲಿಕಾಪ್ಟರ್ಗಳನ್ನು ಭಾರತದಲ್ಲಿ ತಯಾರಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಅತ್ಯಾಧುನಿಕ ಎಸ್-400 ಟ್ರಂಪ್ ಕ್ಷಿಪಣಿ ಒಪ್ಪಂದಕ್ಕೂ ಸಹಿ ಹಾಕಲಾಗಿದ್ದು, ಸುಮಾರು 39 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎಸ್-400 ಟ್ರಂಪ್ ಕ್ಷಿಪಣಿಗಳನ್ನು ರಷ್ಯಾದಿಂದ ಭಾರತವು ಖರೀದಿಸಲಿದೆ.
ಒಪ್ಪಂದಗಳ ಸಹಿ ಪ್ರಕ್ರಿಯೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತುಕತೆ ನಡೆಸಿದರು.
ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಉಭಯ ರಾಷ್ಟ್ರಗಳ ಕಂಪೆನಿಗಳು ಸೇನೆ, ತಾಂತ್ರಿಕ ಕ್ಷೇತ್ರ, ಕೈಗಾರಿಕಾ ಕ್ಷೇತ್ರಗಳಲ್ಲಿನ ಸಹಕಾರವನ್ನು ವಿಸ್ತರಿಸುತ್ತಿವೆ. ಭಯೋತ್ಪಾದನೆಯನ್ನು ನಿಗ್ರಹಿಸಬೇಕಾದ ಅಗತ್ಯವಿದೆ ಎಂದು ಉಭಯ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್ ಅವರ ಜೊತೆಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.