ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೆದ್ದಾರಿ ವ್ಯಾಪ್ತಿಯನ್ನು ವಿಸ್ತರಿಸಿ ರನ್ವೇ ನಿರ್ಮಿಸಲು ರಕ್ಷಣಾ ಸಚಿವಾಲಯದ ಜೊತೆ ಪ್ರಸ್ತಾಪ ಸಲ್ಲಿಸಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ 22 ಸ್ಥಳಗಳನ್ನು ಗುರುತಿಸಲಾಗಿದೆ.
ಹೆದ್ದಾರಿಗಳನ್ನು ಅಗಲೀಕರಿಸಿ ಅಭಿವೃದ್ಧಿ ಪಡಿಸುವ ಮೂಲಕ ರನ್ವೇಗಳ ನಿರ್ಮಾಣಕ್ಕೆ ಪ್ರಸ್ತಾಪಿಸಲಾಗಿದೆ. ಇದು ಸಂಪರ್ಕವನ್ನು ಹೆಚ್ಚಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಕ್ಷಣಾ ಸಚಿವಾಲಯದ ಜೊತೆ ಸಭೆ ನಡೆಸಿ ಈ ಪ್ರಸ್ತಾಪದ ಬಗ್ಗೆ ದೃಢೀಕರಿಸಲಾಗುವುದು. ಎರಡೂ ಸಚಿವಾಲಯಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಿದ್ದು, ಸಮಿತಿಯು ವಿಸ್ತೃತ ಹೆದ್ದಾರಿಗಳಲ್ಲಿ ರನ್ವೇ ನಿರ್ಮಾಣದ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸಲಿವೆ. ಈ ಹೆದ್ದಾರಿಗಳ ಕಾರ್ಯಸಾಧ್ಯತೆಗಳು, ವಿಸ್ತಾರ, ಉದ್ದ ಮತ್ತಿತರ ವಿಚಾರಗಳನ್ನು ಸಮಿತಿ ಪರಿಶೀಲಿಸಲಿದೆ ಎಂದು ಗಡ್ಕರಿ ಹೇಳಿದ್ದಾರೆ.
ದೇಶದ ವಿವಿಧ ರಾಜ್ಯಗಳಲ್ಲಿ ರನ್ವೇ ನಿರ್ಮಿಸುವ ಬಗ್ಗೆ ಸಚಿವ ಗಡ್ಕರಿ ತಿಳಿಸಿದ್ದು, ಸ್ಥಳೀಯ ವಾಯು ಸಂಪರ್ಕವನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಚಿಂತಿಸಿದೆ. ಸ್ಥಳೀಯ ಸಂಪರ್ಕ ಯೋಜನೆ ಆರಂಭಗೊಂಡಲ್ಲಿ ಟಿಕೆಟ್ ದರಗಳಲ್ಲಿ ರಿಯಾಯಿತಿ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.