ಮಂಡಿ: ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಸೀಮಿತ ದಾಳಿಯನ್ನು ಉಲ್ಲೇಖಿಸದೇ ಭಾರತೀಯ ಸೇನೆಗೆ ಮತ್ತೊಮ್ಮೆ ಗೌರ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಸೇನೆಯ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತಿದೆ ಎಂದು ಎಂದು ಸೇನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದಿಂದ 160 ಕಿ.ಮೀ. ದೂರದಲ್ಲಿರುವ ಮಂಡಿ ಎಂಬಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ ಅವರು, ‘ಈ ಹಿಂದೆ ಇಸ್ರೇಲ್ ಬಗ್ಗೆ ಎಲ್ಲರು ಮಾತನಾಡುತ್ತಿದ್ದರು. ಈಗ ನಮ್ಮ ಸೇನೆಗೂ ಈ ಸಾಮರ್ಥ್ಯವಿದೆ ಎಂದು ಎಲ್ಲರಿಗೂ ತಿಳಿದಿದೆ’ ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ 29ರಂದು ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏಳು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿ ಭಾರತದ ನಗರಗಳ ಮೇಲೆ ಭಯೋತ್ಪಾದರ ದಾಳಿಯನ್ನು ನಿಗ್ರಹಿಸಿತ್ತು.
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಅನೇಕ ಸಂದರ್ಭಗಳಲ್ಲಿ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರ ಧೈರ್ಯವನ್ನು ಮಣ್ಣಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ವಿರುದ್ಧ ಈ ದಾಳಿ ನಡೆಸಲಾಗಿದ್ದು, ಉಗ್ರರ ದಾಳಿಗೆ ಭಾರತದ 19 ಸೈನಿಕರು ಹುತಾತ್ಮರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.