ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೆಹಬೂಬ ಮುಫ್ತಿ ಸರ್ಕಾರ ಅಶಾಂತಿಗೆ ಪ್ರಚೋದನೆ ನೀಡಿದ ಆರೋಪಡದಿಯಲ್ಲಿ ಆಪಾದಿತ 12 ಅಧಿಕಾರಿಗಳನ್ನು ವಜಾಗೊಳಿಸಿದೆ. ಅಲ್ಲದೇ 100 ಹೆಚ್ಚು ಜನರ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ಇನ್ನಷ್ಟು ಜನರು ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರ ವಿರೋಧಿ ಚಟುವಟಿಕೆ ಆರೋಪದಡಿ 12 ಸರ್ಕಾರಿ ನೌಕರರನ್ನು ವಜಾಗೊಳಿಸಲು ಮೆಹಬೂಬ ಸರ್ಕಾರ ಬುಧವಾರ ಸಂಜೆ ಆದೇಶಿಸಿತ್ತು. ವಜಾಗೊಂಡಿರುವ 12 ಅಧಿಕಾರಿಗಳು ಭೂಕಂದದಾಯ ಇಲಾಖೆ ಮತ್ತಿತರ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲವು ಶಿಕ್ಷಕರೂ ವಜಾಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ರಾಜ್ಯ ಪೊಲೀಸ್ನ ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧಪಡಿಸಿದ ವರದಿಯ ಆಧಾರದಲ್ಲಿ ಜಮ್ಮು-ಕಾಶ್ಮೀರ ಸರ್ಕಾರ ಈ ಅಧಿಕಾರಿಗಳನ್ನು ವಜಾಗೊಳಿಸಿದೆ. ಇದರಲ್ಲಿ ಕೆಲವು ಅಧಿಕಾರಿಗಳನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಆರೋಪದಡಿಯಲ್ಲಿ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಪಡೆಗಳು ಜುಲೈ 8ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆಗೈದ ಬಳಿಕ ನಡೆದ ಹಿಂಸಾಚಾರದಲ್ಲಿ 90ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 12,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ಥಾನ ಬೆಂಬಲಿತ ದಂಗೆಕೋರರು ಕಲ್ಲು ತೂರಾಟ ಮತ್ತು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದ್ದಾರೆ ಎಂದು ಜಮ್ಮು-ಕಾಶ್ಮೀರ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.