ನವದೆಹಲಿ: ದೇಶದಾದ್ಯಂತ ಸೋಮವಾರದಿಂದ ವಿಜಿಲೆನ್ಸ್ ಅವೇರ್ನೆಸ್ ವೀಕ್’ (ಜಾಗೃತಿ ಮೂಡಿಸುವಿಕೆ ಸಪ್ತಾಹ) ಆಚರಿಸಲಾಗುತ್ತಿದೆ. ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಪ್ರಚಾರಕ್ಕಾಗಿ ಈ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ.
ಕೇಂದ್ರ ಸಚಿವಾಲಯಗಳು, ವಿವಿಧ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ಬ್ಯಾಂಕುಗಳು ಮತ್ತು ಎಲ್ಲ ಇತರ ಸಂಘಟನೆಗಳ ಕಾರ್ಯಕರ್ತರು ಪ್ರತಿಜ್ಞೆ ತೆಗೆದುಕೊಳ್ಳುವ ಮೂಲಕ ಈ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.
ಭ್ರಷ್ಟ ಆಚರಣೆಗಳು ದೇಶದ ಅಭಿವೃದ್ಧಿಯಲ್ಲಿ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಾಗೃತಿ ಇಲಾಖೆ ಆಯುಕ್ತ ಕೆ.ವಿ. ಚೌಧರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.