ನವದೆಹಲಿ: ಹರ್ಯಾಣ ರಾಜ್ಯದ ಹೆಣ್ಣು ಮಕ್ಕಳು ವಿವಿಧ ಸಂದರ್ಭಗಳಲ್ಲಿ ಭಾರತಕ್ಕೆ ಹೆಮ್ಮೆ ಮೂಡಿಸಿದ್ದಾರೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಇಂತಹ ರಾಜ್ಯಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಅಸ್ತಿತ್ವದಲ್ಲಿರುವುದು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಹೆಣ್ಣು ಮಕ್ಕಳ ರಕ್ಷಣೆಗೆ ಪ್ರತಿಜ್ಞೆ ಮಾಡುವಂತೆ ಜನರಿಗೆ ಕರೆ ನೀಡಿದ್ದಾರೆ.
ಹರ್ಯಾಣದ ಸ್ವರ್ಣ ಜಯಂತಿ ಉತ್ಸವದ ಸಂದರ್ಭ ಮಾತನಾಡುತ್ತಿದ್ದ ಅವರು, ಹರ್ಯಾಣ ಒಂದು ಸಣ್ಣ ರಾಜ್ಯವಾಗಿದ್ದರೂ ಅದು ವಿವಿಧ ಕ್ಷೇತ್ರಗಳಲ್ಲಿ ಅನೇಕ ಕೊಡುಗೆಗಳನ್ನು ಮಾಡಿದೆ. ಹರ್ಯಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರಿದ್ದು, ಆರೂ ಅಲ್ಲಿಯ ಉದ್ಯಮಿಗಳು ಅನುಕರಣೀಯ ಯಶಸ್ಸು ಕಂಡಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಇಲ್ಲಿಯ ಜನರು ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಹರ್ಯಾಣ ರಾಜ್ಯ ಹೆಣ್ಣು ಭ್ರೂಣ ಹತ್ಯೆ ತಡೆಗೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಈ ವೇಳೆ ಹೇಳಿದ್ದಾರೆ.
ಈ ಸುವರ್ಣ ಮಹೋತ್ಸವ ವರ್ಷದಲ್ಲಿ ಹರ್ಯಾಣ ಬಹಿರ್ದೆಸೆ ಮುಕ್ತ ರಾಜ್ಯವಾಗಿಸುವ ತಮ್ಮ ಗುರಿಯನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಗ್ರಾಮಗಳ ರೂಪಾಂತರದ ಮೂಲಕ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.