ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ನೀಡಿ ಗೌರವಿಸಿರುವ ಸರ್ಕಾರ ಇದೀಗ ಮತ್ತೊಂದು ಗೌರವ ಸಲ್ಲಿಸಲು ಮುಂದಾಗಿದೆ.
10 ವರ್ಷ ಹಳೆಯ ಜವಹಾರ್ಲಾಲ್ ನೆಹರೂ ನ್ಯಾಷನಲ್ ಅರ್ಬನ್ ರಿನಿವಲ್ ಮಿಶನ್(ಜೆಎನ್ಎನ್ಯುಆರ್ಎಂ)ಗೆ ಮರುನಾಮಕರಣ ಮಾಡಿ ವಾಜಪೇಯಿ ಹೆಸರಿಡಲು ನಿರ್ಧರಿಸಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಭೆ ಸೇರಿದ್ದ ಕೇಂದ್ರ ಸಂಪುಟ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ.
ಅಲ್ಲದೇ ದೇಶದಲ್ಲಿ 100 ಸ್ಮಾರ್ಟ್ ಸಿಟಿ ನಿರ್ಮಿಸುವ ಯೋಜನೆಗೂ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ. ಚೊಚ್ಚಲ ಬಜೆಟ್ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಸರ್ಕಾರ ಘೋಷಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.