ಬೆಂಗಳೂರು : ನವೆಂಬರ್ 3 ಮತ್ತು 4 ರಂದು ಪೆಟ್ರೋಲ್ ಬಂಕ್ಗಳು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಎರಡು ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಗ್ರಾಹಕರಿಗೆ ಲಭ್ಯವಿರುವುದಿಲ್ಲ.
ಅಪೂರ್ವ ಚಂದ್ರ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 3 ಮತ್ತು 4 ರಂದು ಪೆಟ್ರೋಲ್ ಮತ್ತು ಡೀಸೆಲ್ ಡೀಲರ್ಸ್ ಅಸೋಸಿಯೇಶನ್ ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದೆ.
ಕಮಿಷನ್ ಹೆಚ್ಚಳ, ಲ್ಯೂಬ್ ಡಂಪಿಂಗ್ ಸ್ಥಗಿತ, ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆ ವೆಚ್ಚ ಹೆಚ್ಚಳ, ಅಧಿಕಾರಿಗಳ ಕಿರುಕುಳ ತಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸೋಸಿಯೇಶನ್ ಪ್ರತಿಭಟನೆ ನಡೆಸುತ್ತಿದೆ.
ಈ ಮುಷ್ಕರಕ್ಕೆ ದೇಶವ್ಯಾಪಿ ಪೆಟ್ರೋಲ್ ಮತ್ತು ಡೀಸೆಲ್ ಡೀಲರ್ಗಳು ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಎರಡು ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಗ್ರಾಹಕರಿಗೆ ಲಭ್ಯವಾಗುವುದಿಲ್ಲ. ಸರ್ಕಾರಿ ಸ್ವಾಮ್ಯದ 3 ತೈಲ ಕಂಪೆನಿಗಳಿಂದ ಇಂಧನವನ್ನು ಖರೀದಿಸದೆ ಅಖಿಲ ಕರ್ನಾಟಕ ಪೆಟ್ರೋಲಿಯಂ ಡೀಲರ್ಸ್ ಫೆಡರೇಷನ್ ಮುಷ್ಕರಕ್ಕೆ ಬೆಂಬಲ ಸೂಚಿಸಿದೆ.
ನವೆಂಬರ್ 5 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಮಾತ್ರ ಪೆಟ್ರೋಲ್ ಬಂಕ್ಗಳು ಕಾರ್ಯ ನಿರ್ವಹಿಸಲಿದೆ. ಬೇಡಿಕೆ ಈಡೇರುವವರೆಗೂ ಇದು ಮುಂದುವರೆಯಲಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.