ನವದೆಹಲಿ: ಬೇಹುಗಾರಿಕೆ ಪ್ರಕರಣದ ಹಿನ್ನಲೆಯಲ್ಲಿ ಭಾರತದಲ್ಲಿನ ಪಾಕಿಸ್ಥಾನ ರಾಯಭಾರ ಕಛೇರಿಯಲ್ಲಿ ನೇಮಕಗೊಂಡಿದ್ದ 6 ಅಧಿಕಾರಿಗಳು ಭಾರತದಿಂದ ಪಾಕಿಸ್ಥಾನಕ್ಕೆ ವಾಪಾಸ್ಸಾಗಿದ್ದಾರೆ ಎನ್ನಲಾಗಿದೆ.
ಪಾಕಿಸ್ಥಾನ ರಾಯಭಾರ ಕಛೇರಿಯ ಅಧಿಕಾರಿಯೊಬ್ಬರು ಬೇಹುಗಾರಿಕೆ ಜಾಲದಲ್ಲಿ ಶಾಮೀಲಾಗಿರುವುದನ್ನು ಭಾರತೀಯ ಪೊಲೀಸರು ಪ್ರಕಟಿಸಿದ್ದರು. ಇದರ ಬಳಿಕ ಅಕ್ಟೋಬರ್ 27 ರಂದು ಉಭಯ ರಾಷ್ಟ್ರಗಳು ತಮ್ಮ ತಮ್ಮ ಸಿಬ್ಬಂದಿಗಳನ್ನು ವಾಪಾಸ್ ಕರೆಸಿಕೊಳ್ಳುವುದಾಗಿ ಪ್ರಕಟಿಸಿದ್ದವು.
ಇದೀಗ 6 ಪಾಕಿಸ್ಥಾನದ 6 ಅಧಿಕಾರಿಗಳು ಭಾರತದಲ್ಲಿರುವ ರಾಯಭಾರ ಕಛೇರಿಯನ್ನು ತೊರೆದಿದ್ದಾರೆ ಎನ್ನಲಾಗಿದೆ. ಇವರು ವಾಘಾ ಗಡಿಯ ಮೂಲಕ ಪಾಕಿಸ್ಥಾನಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಭಯ ದೇಶಗಳ ನಡುವೆ ಬಾಂಧವ್ಯ ಬಿಗಡಾಯಿಸುತ್ತಿರುವ ಪರಿಸ್ಥಿತಿಯಲ್ಲಿ ಭಾರತದಲ್ಲಿದ್ದು ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರತದ ಅಧಿಕಾರಿಗಳು ವರ್ತನೆ, ಈಗಿರುವ ಪರಿಸ್ಥಿತಿಯಲ್ಲಿ ನಮಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪಾಕ್ ಅಧಿಕಾರಿಗಳು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ಥಾನ ರಾಯಭಾರ ಕಛೇರಿಯ ಮೊಹಮ್ಮದ್ ಅಖ್ತರ್ನನ್ನು ಬಂಧಿಸಿ, ಉಚ್ಛಾಟನೆಗೊಳಿಸಲಾಗಿತ್ತು. ಇದೀಗ ಪಾಕ್ ತನ್ನ 6 ಅಧಿಕಾರಿಗಳನ್ನು ವಾಪಾಸ್ ಕರೆಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.