ಮೈಸೂರು : ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ, ಮೈಸೂರು ಇದರ ವತಿಯಿಂದ ನವೆಂಬರ್ 7ರ ಸೋಮವಾರ ಬೆಳಗ್ಗೆ 10.30 ಕ್ಕೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ.
ಮತಾಂಧ, ಹಿಂದೂ ವಿರೋಧಿ, ಕನ್ನಡ ದ್ರೋಹಿ ಟಿಪ್ಪು ಜಯಂತಿ ನಿಲ್ಲಿಸಿ ಎಂಬ ಕರೆಯೊಂದಿಗೆ ಮೈಸೂರಿನ ಅರಮನೆ ಆಂಜನೇಯ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರತಿಭಟನಾ ಜಾಥಾವು ನಡೆಯಲಿದೆ.
ಈಗಾಗಲೇ ಕರ್ನಾಟಕದಲ್ಲಿ ಕೆಎಫ್ಡಿ, ಎಸ್ಡಿಪಿಐ, ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳು ತಲೆಯೆತ್ತಿ ಬರ್ಬರ ಕೌರ್ಯವನ್ನು ಪ್ರದರ್ಶಿಸುತ್ತಿವೆ. ಇಂತಹ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸುವುದೆಂದರೆ ಸರ್ಕಾರವೇ ಭಯೋತ್ಪಾದನೆಗೆ ಕುಮ್ಮಕ್ಕು ಕೊಟ್ಟಂತೆ ಆಗುತ್ತದೆ. ಟಿಪ್ಪುವಿನಂತಹ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ದ್ರೋಹಿಯ ಜಯಂತಿ ನಮಗೇಕೆ ಬೇಕು ? ಟಿಪ್ಪು ಜಯಂತಿಯನ್ನು ವಿರೋಧಿಸೋಣ, ಜಾತ್ಯತೀತವಾದಿಗಳ ಸುಳ್ಳು ಇತಿಹಾಸವನ್ನು ಧಿಕ್ಕರಿಸೋಣ. ಟಿಪ್ಪು ಜಯಂತಿಯನ್ನು ವಿರೋಧಿಸುವುದು ಎಂದರೆ ಕನ್ನಡನಾಡಿನ ಶೌರ್ಯ ಪರಂಪರೆಯನ್ನು ಗೌರವಿಸಿದಂತೆ. ಹೀಗಾಗಿ ಬೃಹತ್ ಪ್ರತಿಭಟನಾ ಜಾಥಾದಲ್ಲಿ ಪಾಲ್ಗೊಳ್ಳುವಂತೆ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ, ಮೈಸೂರು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.