ಶ್ರೀನಗರ: ಜುಲೈ ತಿಂಗಳಿನಲ್ಲಿ ಉಗ್ರ ಬುರ್ಹಾನ್ ವಾನಿ ಹತ್ಯೆಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 4 ತಿಂಗಳುಗಳಿಂದ ಹಿಂಸಾಚಾರ ನಡೆಯುತ್ತಲೇ ಇದೆ.
ಈ ಮಧ್ಯೆ ಕಳೆದ 3 ತಿಂಗಳುಗಳಲ್ಲಿ ಸುಮಾರು 27 ಶಾಲೆಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
ಈ ಶಾಲೆಗಳ ಪುನರ್ನಿರ್ಮಾಣದ ಪ್ರಸ್ತಾಪವನ್ನು ನನಸಾಗಿಸುವುದಾಗಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ. ಕಾಶ್ಮೀರದಲ್ಲಿ ಸುಟ್ಟು ಹಾಕಲಾದ ಶಾಲೆಗಳನ್ನು ಪುನರ್ ಸ್ಥಾಪಿಸಲು ನಾನು ಕೊಡುಗೆ ನೀಡಲಿದ್ದೇನೆ ಎಂದು ರವಿಶಂಕರ್ ಗುರೂಜಿ ಟ್ವೀಟ್ ಮಾಡಿದ್ದಾರೆ.
ಜಮ್ಮು ಕಾಶ್ಮೀರ ರಾಜ್ಯ ಹೈಕೋರ್ಟ್ ಕೂಡ ಈ ಶಾಲೆಗಳನ್ನು ರಕ್ಷಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.