ಮೈಸೂರು : ಮೈಸೂರಿನಲ್ಲಿ ಸ್ಥಳೀಯ ಆರ್ಎಸ್ಎಸ್ ಸ್ವಯಂಸೇವಕ ರವಿ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ನವೆಂಬರ್ 4 ರ ರಾತ್ರಿ ಮೀಟಿಂಗ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಮಾಗಳಿ ಹೊರವಲಯದಲ್ಲಿ ರವಿ ಅವರ ಮೃತ ದೇಹ ಪತ್ತೆಯಾಗಿದೆ. ರವಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಇದು ಅನುಮಾನಾಸ್ಪದ ಸಾವು ಎಂದು ಹೇಳಲಾಗಿದೆ. ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಲೂಕು ಬಿಜೆಪಿ ಯುವ ಮೋರ್ಚಾದ ಮಾಜಿ ಅಧ್ಯಕ್ಷರಾಗಿದ್ದ ರವಿ ಅವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಗಳಿಯವರಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ, ರಾಜಕಾರಣದಲ್ಲಿ ಮತ್ತು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕೇರಳದಲ್ಲಷ್ಟೇ ಅಲ್ಲದೆ ರಾಜ್ಯದಲ್ಲೂ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರ, ಬಿಜೆಪಿ ಕಾರ್ಯಕರ್ತರ ಅನುಮಾನಾಸ್ಪದ ಸಾವುಗಳು ಹೆಚ್ಚುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.