ಮುಂಬಯಿ: ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ್ ಸೇನಾ (ಎಂಎನ್ಎಸ್) ಪಕ್ಷ ಮುಂಬರುವ ಬೃಹನ್ಮುಂಬಯಿ ಪುರಸಭಾ ಚುನಾವಣೆ (ಬಿಎಂಸಿ)ಗೂ ಮುನ್ನ ತನ್ನ ಪಕ್ಷದ ಚಿಹ್ನೆಯನ್ನು ಬದಲಿಸಲು ಚಿಂತನೆ ನಡೆಸುತ್ತಿದೆ.
ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಕ್ಷದ ರೈಲ್ವೆ ಇಂಜಿನ್ ಹೊಂದಿರುವ ಚಿಹ್ನೆಯ ದಿಕ್ಕನ್ನು ಬಲದಿಂದ ಎಡ ಭಾಗಕ್ಕೆ ಬದಲಿಸಲು ಚಿಂತಿಸಲಾಗಿದ್ದು, ಅಗತ್ಯ ದಾಖಲೆಗಳನ್ನು ಒದಗಿಸಿದ ನಮತರವೇ ಚುನಾವಣಾ ಆಯೋಗ ಇದಕ್ಕೆ ಒಪ್ಪಿಗೆ ನೀಡಲಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಎಂಎನ್ಎಸ್ 2009ರಲ್ಲಿ 13 ವಿಧಾನಸಭೆ ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, 2014ರ ಚುನಾವಣೆಯಲ್ಲಿ ಕೇವಲ 1 ಸ್ಥಾನವನ್ನು ಮಾತ್ರ ಗೆದ್ದುಕೊಂಡಿತ್ತು.
ಪಕ್ಷದ ಚಿಹ್ನೆ ಬದಲಾವಣೆಯ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಈ ಪ್ರಸ್ತಾಪವನ್ನು ಪಕ್ಷದ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಚುನಾವಣೆ ಘೋಷಣೆಯಾದ ನಂತರ ಚಿಹ್ನೆಯನ್ನು ನಿರ್ಧರಿಸಲಾಗುವುದು ಎಂದು ಎಂಎನ್ಎಸ್ ನಾಯಕ ಶಿಶಿರ್ ಶಿಂಧೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.