ಕಠ್ಮಂಡು: ಭೂಕಂಪ ಪೀಡಿತ ನೇಪಾಳದಲ್ಲಿ ರಕ್ಷಣಾಕಾರ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ. ಸರ್ಕಾರದ ಕಳಪೆ ಪರಿಹಾರ ಕಾರ್ಯದ ವಿರುದ್ಧ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.
ನೇಪಾಳ ಗೃಹಸಚಿವ ಬಂದೇವ್ ಗೌತಮ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಠ್ಮಂಡುವಿನ ಹೃದಯ ಭಾಗದಲ್ಲಿ ಬುಧವಾರ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗಿದೆ.
ಇನ್ನೊಂದೆಡೆ ಮೃತರ ಸಂಖ್ಯೆ 6 ಸಾವಿರ ದಾಟಿದೆ. ಭಾರತೀಯ ಸೇನಾಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಇದುವರೆಗೆ 280 ಟನ್ನಿನಷ್ಟು ಮೆಡಿಸಿನ್, ಹೊದಿಕೆ, ನೀರು ಮತ್ತು ಆಹಾರ ಸೇರಿದಂತೆ ಇತರ ಪರಿಹಾರ ಸಾಮಾಗ್ರಿಗಳನ್ನು ವಿವಿಧ ಹಳ್ಳಿಗೆ ಸಾಗಾಣೆ ಮಾಡಿದೆ.
ನೇಪಾಳದಲ್ಲಿ ಸಿಲುಕಿ ಹಾಕಿಕೊಂಡಿದ್ದ 6 ಸಾವಿರ ಭಾರತೀಯರನ್ನೂ ಭಾರತಕ್ಕೆ ವಾಪಾಸ್ ಕರೆತರಲಾಗಿದೆ. ವಿಶ್ವಸಮುದಾಯ ಕೂಡ ನೇಪಾಳದ ನೋವಿಗೆ ಸ್ಪಂಧಿಸಿದ್ದು ರಕ್ಷಣಾ ಕಾರ್ಯದಲ್ಲಿ ಸಹಾಯಹಸ್ತ ಚಾಚಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.