ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಕೇರಳದ ಅವರ ಎಲ್ಡಿಎಫ್ ಸರ್ಕಾರ ಉಲ್ಟಾ ತಿರುಗಿದ್ದು, ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಸೋಮವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ.
10-50 ವರ್ಷದ ಮಹಿಳೆಯರಿಗೆ ಶಬರಿಮಲೆ ಪ್ರವೇಶ ನಿರ್ಬಂಧಿಸಲಾಗಿತ್ತು. ಶಬರಿಮಲೆ ಟ್ರಸ್ಟ್ ಸಂಪ್ರದಾಯದ ಹೆಸರಲ್ಲಿ ಮಹಿಳೆಯರ ಪ್ರವೇಶಕ್ಕೆ ವಿಧಿಸಿದ್ದ ನಿಷೇಧಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ ಹಿಂದೆ ಎಲ್ಡಿಎಫ್ ಸರ್ಕಾರ ಮಹಿಳೆಯರಿಗೆ ದೇವಸ್ಥಾನದ ಆವರಣದಲ್ಲಿ ಪ್ರವೇಶ ನೀಡಬಾರದು ಎಂಬ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ನಿಲುವಿಗೆ ಬೆಂಬಲಿಸುತ್ತಿರುವುದಾಗಿ ಹೇಳಿತ್ತು.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಮೇಲಿನ ನಿಷೇಧ ದೇವಸ್ಥಾನದ ಸಂಪ್ರದಾಯ ಮತ್ತು ಪದ್ಧತಿಯ ಭಾಗವಾಗಿದ್ದು, ಅದನ್ನು ಮುಂದುವರೆಸಬೇಕು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಭಿಪ್ರಾಯ ವ್ಯಕ್ತಪಡಿಸಿತ್ತು.
ಆದರೆ ನಿರ್ಧಾರವನ್ನು ವೀರೋಧಿಸುವುದಾಗಿ ಅಯ್ಯಪ್ಪ ದರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.