ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ರೂ. 500 ಮತ್ತು ರೂ.1000 ಮುಖಬೆಲೆಯ ನೋಟುಗಳ ಮುದ್ರಣ ಮತ್ತು ಬಳಕೆಯನ್ನು ರದ್ದುಗೊಳಿಸಿದ್ದಾರೆ.
ಆರ್ಬಿಐ ರೂ.500 ಮತ್ತು ರೂ. 2000 ಮುಖಬೆಲೆಯ ಹೊಸ ನೋಟುಗಳನ್ನು ಮಾಹಿತಿಯನ್ನು ನೀಡಿದ್ದು, ಈ ಹೊಸ ನೋಟುಗಳು ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಜಾರಿಗೆ ಬರಲಿದೆ ಎಂದು ಆರ್ಬಿಐ ತಿಳಿಸಿದೆ.
ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಮತ್ತು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಹೊಸ ನೋಟುಗಳ ಮಾಹಿತಿಯನ್ನು ನೀಡಿದ್ದಾರೆ.
ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಳಕೆಯನ್ನು ತಡೆಗಟ್ಟಲು ರೂ.500 ಮತ್ತು ರೂ. 1000 ಮುಖಬೆಲೆಯ ಹಳೆಯ ನೋಟುಗಳನ್ನು ನ.9ರ ಮಧ್ಯರಾತ್ರಿಯಿಂದ ರದ್ದುಗೊಳಿಸಲಾಗುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಹಳೆಯ ನೋಟುಗಳನ್ನು ಪೋಸ್ಟ್ ಆಫೀಸ್ ಮತ್ತು ಬ್ಯಾಂಕ್ಗಳಲ್ಲಿ ಡಿ.30ರ ವರೆಗೆ ಬದಲಾಯಿಸಲು ಅವಕಾಶವಿದೆ. ಒಂದು ವೇಳೆ ಅಷ್ಟರೊಳಗೆ ನೋಟುಗಳ ಬದಲಾವಣೆ ಸಾಧ್ಯವಾಗದಿದ್ದಲ್ಲಿ ಆರ್ಬಿಐ ಕಚೇರಿಗಳಲ್ಲಿ ತಮ್ಮ ಗುರುತಿನ ಚೀಟಿಯೊಂದಿಗೆ ಮಾರ್ಚ್ 31, 2017ರ ವರೆಗೆ ಬದಲಾವಣೆಗೆ ಅವಕಾಶ ಇರಲಿದೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.