ನವದೆಹಲಿ: ನಕಲಿ ಸರ್ಟಿಫಿಕೇಟ್ ಸೃಷ್ಟಿಸಿದ ಆರೋಪಕ್ಕೆ ಗುರಿಯಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದಾಗ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದರು.
ಬುಧವಾರ ಬಿಜೆಪಿ ಕಾರ್ಯಕರ್ತರೂ ತೋಮರ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ತೋಮರ್ ಅವರು ನಕಲಿ ಕಾನೂನು ಪದವಿಯನ್ನು ಹೊಂದಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಅವರು ನಮ್ಮ ಬಳಿ ಪದವಿ ಪಡೆದ ಬಗ್ಗೆ ದಾಖಲೆಗಳಿಲ್ಲ ಎಂದು ಬಿಹಾರ ವಿಶ್ವವಿದ್ಯಾನಿಲಯವೂ ತಿಳಿಸಿದೆ. ಹೀಗಾಗೀ ಅವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಆದರೆ ತಾನು ನಕಲಿ ಸರ್ಟಿಫಿಕೇಟ್ ಹೊಂದಿಲ್ಲ ಎಂದು ತೋಮರ್ ವಾದಿಸುತ್ತಿದ್ದಾರೆ. ರಾಜೀನಾಮೆ ನೀಡಲೂ ನಿರಾಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.