ಬೆಂಗಳುರು: ಜಾಗತಿಕ ಸ್ಥಾನೀಕರಣ ವ್ಯವಸ್ಥೆಯನ್ನು (ಜಿಪಿಎಸ್) ಅಳವಡಿಸಲಾದ ಅಂಬ್ಯುಲೆನ್ಸ್ನ್ನು ಶೀರ್ಘದಲ್ಲೇ ಪ್ರತಿ 10 ಕಿ.ಮೀ. ಅಂತರದಲ್ಲಿ ಗ್ರಾಮೀಣ ಪ್ರದೇಶಗಳ ರೋಗಿಗಳಿಗೆ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ.
ಅಪಘಾತ, ಹೃದಯಾಘಾತ, ಬೆಂಕಿ ಅನಾಹುತ, ವಿಶೇಷವಾಗಿ ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಕಾಲಿಕ ತುರ್ತು ಸಹಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಇದರ ಮೇಲ್ವಿಚಾರಣೆಗೆ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ರೋಗಿಗಳ ಕರೆ ಬಂದಲ್ಲಿ ನಿಯಂತ್ರಣ ಕೊಠಡಿಯು ಸೂಕ್ತ ಸಮಯದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವುದು, ಅವರ ಸಾಗಾಟ ಮತ್ತು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ದಾಖಲಿಸಲು ಎಲ್ಲಾ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಸಚಿವ ರಮೇಶ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.