ನವದೆಹಲಿ: ಪಾಕಿಸ್ಥಾನ ಭದ್ರತಾ ಪಡೆಗಳು ಕೇವಲ ಒಂದು ವಾರದ ಅವಧಿಯಲ್ಲಿ 12 ಬಾರಿ ಕದನ ವಿರಾಮ ಉಲ್ಲಂಘನೆ ಮಾಡುದ್ದಾರೆ. ಇದೇ ವೇಳೆ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ 18 ಬಾರಿ ಪಾಕ್ ಮೂಕದ ಉಗ್ರರ ಒಳನುಸುಳುವಿಕೆಯನ್ನು ಭಗ್ನಗೊಳಿಸಿವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಪಾಕಿಸ್ಥಾನ ಸಂಯಮ ವಹಿಸುವಂತೆ ಕರೆ ನೀಡಿದ ಹರತಾಗಿಯೂ ಪಾಕ್ ಭದ್ರತಾ ಪಡೆಗಳು ನ.9ರಿಂದ ನ.15ರ ನಡುವೆ 12 ಬಾರಿ ಕದನ ವಿರಾಮ ಉಲ್ಲಂಘನೆ ನಡೆಸಿದೆ. ಪಾಕ್ ಉಗ್ರರಿಂದ 18 ಬಾರಿ ಒಳನುಸುಳುವಿಕ ಸಂಭವಿಸಿದೆ. ಪಾಕ್ನ ಈ ದುಷ್ಕೃತ್ಯ 2003ರ ಕದನ ವಿರಾಮ ಒಪ್ಪಂದದ ಉಲ್ಲಂಘನೆಯನ್ನು ಸ್ಪಷ್ಟಪಡಿಸುತ್ತದೆ ಎಂದು ವಿದೇಶಾಂಗ ವ್ಯಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಗಡಿಯಲ್ಲಿ ನಡೆಯುವ ಕದನ ವಿರಾಮ ಉಲ್ಲಂಘನೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಪಾಕಿಸ್ಥಾನದ ಉನ್ನತ ಆಯೋಗದ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಲಾಗಿದೆ. ಗೃಹ ಸಚಿವಾಲಯದ ರಾಜ್ಯ ಸಚಿವ ಹಂಸರಾಜ್ ಅಹಿರ್ ಅವರೂ ರಾಜ್ಯಸಭೆಯಲ್ಲಿ ಕಳೆದ 10 ತಿಂಗಳಿನಲ್ಲಿ 369 ಬಾರಿ ಕದನ ವಿರಾಮ ಉಲ್ಲಂಘನೆ ನಡೆದಿರುವ ಬಗ್ಗೆ ತಿಳಿಸಿದ್ದಾರೆ ಎಂದು ಸ್ವರೂಪ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.