ಮಂಗಳೂರು : ದ. ಕ. ಜಿಲ್ಲೆಯಾದ್ಯಂತ ಹಿಂದುಗಳ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆಯತ್ನಗಳ ವಿರುದ್ಧ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ದಿನಾಂಕ 21-11-2016 ರಂದು ಜಿಲ್ಲಾಧಿಕಾರಿ ಕಛೇರಿ ಎದುರು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯದಲ್ಲಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರದ ಪ್ರೋತ್ಸಾಹ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯದಿಂದ ಮತಾಂಧ ಶಕ್ತಿಗಳ ಅಟ್ಟಹಾಸ ಮೆರೆಯುತ್ತಿದ್ದು, ಹಿಂದುಗಳು ಹಾಗೂ ಸಂಘಪರಿವಾರ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ನಡೆಸುವ ಹತ್ಯೆಗಳು, ದಾಳಿ, ಆಕ್ರಮಣಗಳಿಂದಾಗಿ ಜನ ಸಾಮಾನ್ಯರು ಭಯಭೀತರಾಗಿದ್ದಾರೆ. ಇಷ್ಟೆಲ್ಲ ಘಟನೆಗಳು ನಡೆದರೂ ಜಿಲ್ಲೆಯ ಸಚಿವರುಗಳು ಓಟ್ ಬ್ಯಾಂಕ್ ರಾಜಕಾರಣದಿಂದ ಮೌನವಾಗಿರುವುದು ಖಂಡನೀಯ. ಇದನ್ನು ಖಂಡಿಸಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು.
ಈ ಸತ್ಯಾಗ್ರಹಕ್ಕೆ ದ.ಕ. ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದ್ದು, ಧರಣಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪ್ರೊ. ಎಂ. ಬಿ. ಪುರಾಣಿಕ್, ಸೇರಿದಂತೆ ಅನೇಕ ಗಣ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.