ಒಡಿಶಾ : ಸ್ವದೇಶಿ ನಿರ್ಮಿತ ಕ್ಷಿಪಣಿ ಪೃಥ್ವಿ-2 ಪ್ರಯೋಗಾರ್ಥ ಉಡಾವಣೆಯು ಯಶಸ್ವಿಯಾಗಿ ನಡೆದಿದೆ.
ಒಡಿಶಾದ ಚಂಡಿಪುರ್ ಉಡಾವಣಾ ಕೇಂದ್ರದಲ್ಲಿ ಸ್ವದೇಶಿ ನಿರ್ಮಿತ ಕ್ಷಿಪಣಿ ಪೃಥ್ವಿ-2 ಪ್ರಯೋಗಾರ್ಥ ಉಡಾವಣೆಯನ್ನು ಸೇನೆಯು ಬೆಳಗ್ಗೆ 9.35 ಕ್ಕೆ ಯಶಸ್ವಿಯಾಗಿ ಪರೀಕ್ಷಿಸಿತು ಎಂದು ಮೂಲಗಳು ತಿಳಿಸಿವೆ.
ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಮತ್ತು ಅಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯಬಲ್ಲ ಪೃಥ್ವಿ-2 ಮಧ್ಯಮ ವ್ಯಾಪ್ತಿಯ ನೆಲದಿಂದ ನೆಲಕ್ಕೆ ಪ್ರಯೋಗಿಸಬಹುದಾಗಿದೆ.
ಪೃಥ್ವಿ-2 ಕ್ಷಿಪಣಿಯು 500 ರಿಂದ 1000 ಕೆಜಿ ಭಾರದ ಶಸ್ತ್ರಾಸ್ತ್ರಗಳನ್ನು ಹೊತ್ತು 350 ಕಿ.ಮೀ. ದೂರ ನೆಗೆಯಬಲ್ಲದು.
ಡಿಆರ್ಡಿಒ ಮೇಲುಸ್ತುವಾರಿಯಲ್ಲಿ ಭಾರತೀಯ ಸೇನೆಯ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ ಈ ಸಂಪೂರ್ಣ ಚಟುವಟಿಕೆಗಳನ್ನು ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.