ನವದೆಹಲಿ: ವಿದ್ಯಾರ್ಥಿಗಳು ವಿದ್ಯುತ್ ಉಳಿತಾಯದ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ಸಾಮೂಹಿಕ ಜಾಗೃತಿ ಕಾರ್ಯಕ್ರವನ್ನು ಆರಂಭಿಸಿದೆ. ತಮ್ಮ ಮನೆಯಲ್ಲಿ ಗರಿಷ್ಠ ಮಟ್ಟದಲ್ಲಿ ಇಂಧನ ಉಳಿಸುವ ನಿಟ್ಟಿನಲ್ಲಿ ಸುಮಾರು 1 ಲಕ್ಷ ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸ್ಫರ್ಧಿಸಲಿದ್ದಾರೆ.
ಮಕ್ಕಳು ತಮ್ಮ ಮನೆಯಲ್ಲಿ ಮಾರ್ಚ್ 2017 ತನಕ ಮಾಸಿಕ ವಿದ್ಯುತ್ಚ್ಛಕ್ತಿ ಬಿಲ್ ಆಧಾರದಲ್ಲಿ ವಿದ್ಯುತ್ ಬಳಕೆ ಮಾಹಿತಿಯ ದಾಖಲೆಗಳನ್ನು ನಿರ್ವಹಿಸಲು ಸೂಚಿಲಾಗುವುದು. ಪಾಲಕರು ಮತ್ತು ಶಿಕ್ಷಕರು ಪ್ರತೀ ತಿಂಗಳು ಈ ದಾಖಲೆಗಳಿಗೆ ಸಹಿ ಹಾಕಲಿದ್ದು, ಅತೀ ಕಡಿಮೆ ಯೂನಿಟ್ನೊಂದಿಗೆ ಕಡಿಮೆ ವಿದ್ಯುತ್ ಬಳಕೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನಗಳನ್ನು ನೀಡಲಾಗುವುದು.
ವಿದ್ಯಾರ್ಥಿಗಳು ವಿದ್ಯುತ್ ಬಿಲ್ ಕಡಿಮೆ ಮಾಡಲು ತಮ್ಮ ನವೀನ ಪ್ರಯತ್ನಗಳಿಗೆ ಮತ್ತು ಕಲ್ಪನೆಗಳನ್ನು ಹಂಚಿಕೊಳ್ಳಲು ಉತ್ತೇಜಿಸಲಾಗುವುದು. ಪ್ರತಿ ವರ್ಷ 24 ಕೋಟಿ ಯೂನಿಟ್ ವಿದ್ಯುತ್ ಉಳಿತಾಯ ಮಾಡುವುದು ಸರ್ಕಾರದ ಉದ್ದೇಶವಾಗಿದ್ದು, ಪ್ರತಿ ವಿದ್ಯಾರ್ಥಿಯಿಂದ 10-30 ಯೂನಿಟ್ ವಿದ್ಯುತ್ ಉಳಿತಾಯವಾಗಲಿದೆ ಎಂದು ಮೊಟ್ ಮೆಕ್ಡೊನಾಲ್ಡ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.