ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೇರಳ ಗಡಿ ಭಾಗದಿಂದ ಮಕ್ಕಳ ಅಪಹರಣ ಜಾಲವೊಂದು ಗಡಿನಾಡಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಅಪಹರಣದಂಥಹ ಅನೈತಿಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆಯೆಂದು ಈಗಾಗಲೇ 3-4 ಮಕ್ಕಳು ಅಪಹೃತರಾಗಿದ್ದಾರೆಂದು ವದಂತಿ ಹಬ್ಬಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿರುವ ಗಂಭೀರ ಪ್ರಕರಣವನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಇಂದು ಸದನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಇದಕ್ಕೆ ಉತ್ತರವಾಗಿ ರಾಜ್ಯ ಗೃಹ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣದ ಬಗ್ಗೆ ವದಂತಿಗಳು ಹುಟ್ಟಿದ್ದು, ಇಂತಹ ವದಂತಿಗಳ ಬಗ್ಗೆ ದಕ ಜಿಲ್ಲೆ ಮತ್ತು ಮಂಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ಯಾವುದೇ ಮಕ್ಕಳ ಅಪಹರಣಕ್ಕೊಳಗಾಗಿರುವ ಪ್ರಕರಣ ದಾಖಲಾಗಿರುವುದಿಲ್ಲ ಹಾಗೂ ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲವೆಂದು ಸ್ಪಷ್ಟೀಕರಣ ನೀಡಿರುತ್ತಾರೆ. ದಕ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸುತ್ತಿದ್ದು, ಜಿಲ್ಲೆಯ ಹಾಗೂ ನಗರದ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಾಗೃತಗೊಳಿಸುವುದರ ಜೊತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಗೃಹ ಸಚಿವರು ಲಿಖಿತ ಉತ್ತರವನ್ನು ನೀಡಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.