ನವದೆಹಲಿ : ಕೇಂದ್ರೀಯ ಮಾನವ ಸಂಪನ್ಮೂಲ ಸಚಿವಾಲಯದ ಉನ್ನತ ಶಿಕ್ಷಣ ವಿಭಾಗದ ಕಾರ್ಯದರ್ಶಿಯಾಗಿ ಕೇವಲ್ ಕುಮಾರ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿಯು ಕೇಂದ್ರೀಯ ಮಾನವ ಸಂಪನ್ಮೂಲ ಸಚಿವಾಲಯದ ಉನ್ನತ ಶಿಕ್ಷಣ ವಿಭಾಗದ ಕಾರ್ಯದರ್ಶಿಯಾಗಿ ಕೇವಲ್ ಶರ್ಮಾ ಅವರ ಆಯ್ಕೆಗೆ ಸಮ್ಮತಿ ಸೂಚಿಸಿದೆ.
ವಿನಯ್ ಶೀಲಾ ಓಬೆರಾಯ್ ಅವರು ನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಕೇವಲ್ ಶರ್ಮಾ ಅವರನ್ನು ಉನ್ನತ ಶಿಕ್ಷಣ ವಿಭಾಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಫೆಬ್ರವರಿ ತಿಂಗಳಲ್ಲಿ ವಿನಯ್ ಶೀಲಾ ಓಬೆರಾಯ್ ಅವರು ನಿವೃತ್ತರಾಗಲಿದ್ದು ಕೇವಲ್ ಶರ್ಮಾ ಅವರು ಅವರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುವರು.
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ಕೇವಲ್ ಕುಮಾರ್ ಅವರು 1983 ರ ಬ್ಯಾಚ್ನ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, 2015 ರಲ್ಲಿ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.