ನವದೆಹಲಿ: ಕೇಂದ್ರ ಸರ್ಕಾರದಿಂದ ನಿಷೇಧಿತ ರೂ.500 ಮತ್ತು 1000 ರೂ. ನೋಟುಗಳನ್ನು ಪೋಸ್ಟ್ ಆಫೀಸ್ಗಳ ಉಳಿತಾಯ ಖಾತೆಗಳಲ್ಲಿ ಠೇವಣಿ ಮಾಡಬಹುದು ಎಂದು ಹಣಕಾಸು ಸಚಿವಾಲಯ ಹೇಳಿದೆ.
ಅಂಚೆ ಕಚೇರಿಗಳ ಉಳಿತಾಯ ಖಾತೆಗಳಲ್ಲಿ ಹಳೇ ನೋಟುಗಳ ಠೇವಣಿಯನ್ನು ಈ ಹಿಂದೆ ವಿಧಿಸಲಾಗಿದ್ದ ಠೇವಣಿ ನಿಷೇಧ (ಸಣ್ಣ ಉಳಿತಾಯ ಖಾತೆಗಳಲ್ಲಿ ನವೆಂಬರ್ 24ರ ನಂತರ ರೂ.500 ಮತ್ತು 1000 ರೂ. ಮೇಲಿನ ಠೇವಣಿ ನಿಯಮ)ದಿಂದ ಪ್ರತ್ಯೇಕಿಸಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಗ್ರಾಹಕರು ತಮ್ಮ ಸಣ್ಣ ಉಳಿತಾಯ ಖಾತೆಗಳಲ್ಲಿ ನಿಷೇಧಿತ ಹಳೇ ನೋಟುಗಳ ಠೇವಣಿಗೆ ಅನುಮತಿ ನೀಡದಿರಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ತಕ್ಷಣದಿಂದಲೇ ಸಣ್ಣ ಉಳಿತಾಯ ಖಾತೆಗಳಲ್ಲಿ ಹಳೇ ನೋಟುಗಳ ಠೇವಣಿಯನ್ನು ಸ್ವೀಕರಿಸದಿರಲು ಬ್ಯಾಂಕ್ಗಳಿಗೆ ಬಾರತೀಯ ರಿಸರ್ವ್ ಬ್ಯಾಂಕ್ ಸಲಹೆ ನೀಡಿದೆ.
ಸಣ್ಣ ಉಳಿತಾಯ ಖಾತೆ ಯೋಜನೆಗಳು ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ನ್ಯಾಶನಲ್ ಸೇವಿಂಗ್ಸ್ ಸರ್ಟಿಫಿಕೇಟ್ (ಎನ್ಎಸ್ಸಿ), ಹಿರಿಯ ನಾಗರಿಕ ಉಳಿತಾಯ ಯೋಜನೆ (ಎಸ್ಸಿಎಸೆಎಸ್) ಖಾತೆ ಮತ್ತು ಕಿಸಾನ್ ವಿಕಾಸ್ ಪತ್ರ ಮತ್ತಿತರ ಖಾತೆಗಳು ಒಳಗೊಂಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.