ನವದೆಹಲಿ : ಗುರು ಗೋವಿಂದ್ ಸಿಂಗ್ ಅವರ 350 ನೇ ಜನ್ಮ ದಿನಾಚರಣೆ ನಿಮಿತ್ತ ಇಂದು ಪ್ರಧಾನಿ ಮೋದಿಯವರು ಪಂಜಾಬ್ಗೆ ತೆರಳಲಿದ್ದಾರೆ.
ಸಿಖ್ಖರ 10ನೇ ಗುರು, ಗುರು ಗೋವಿಂದ್ ಸಿಂಗ್ ಅವರ 350 ನೇ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ರೂಪನಗರ್ ಜಿಲ್ಲೆಯ ಶ್ರೀ ಆನಂದ್ಪುರ್ ಸಾಹಿಬ್ಗೆ ಭೇಟಿ ನೀಡಿ ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಬಥಿಂಡಾ ಜಿಲ್ಲೆಗೆ ತೆರಳುವ ಪ್ರಧಾನಿ ಮೋದಿ, ಅಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ನಂತರ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.