ನವದೆಹಲಿ: ಹೆಚ್ಚಿನ ಮುಖಬೆಲೆಯ ನೋಟುಗಳ ನಿಷೇಧದ ನಂತರ ಬ್ಯಾಂಕ್ಗಳಲ್ಲಿ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ದಾಖಲೆ ರಹಿತ ಬ್ಯಾಂಕ್ ಠೇವಣಿಗಳ ಮೇಲೆ ಶೇ.60ರಷ್ಟು ತೆರಿಗೆ ವಿಧಿಸಲು ಕಾನೂನು ತಿದ್ದುಪಡಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನೋಟು ನಿಷೇಧದ ಎರಡು ವಾರಗಳಲ್ಲಿ ಶೂನ್ಯ ಮೊತ್ತ ಹೊಂದಿದ್ದ ಜನ್ ಧನ್ ಖಾತೆಗಳಲ್ಲಿ 21,000 ಕೋಟಿ ರೂ. ಠೇವಣಿಯಾಗಿದೆ. ಇದು ಕಪ್ಪು ಹಣದ ವರ್ಗಾವಣೆ ಮಾಡಿರುವ ಸಾಧ್ಯತೆ ಬಗ್ಗೆ ಅಧಿಕಾರಿಗಳು ಶಂಕಿಸಿದ್ದಾರೆ.
ಸಂಸತ್ತಿನ ಅಧಿವೇಶನದ ಸಂದರ್ಭದಲ್ಲಿ ಈ ಸಭೆಯನ್ನು ಕರೆಯಲಾಗಿತ್ತು, ಆದರೆ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ನೀತಿ-ನಿರ್ಧಾರ ಕೈಗೊಂಡಿರುವ ಬಗ್ಗೆ ಬಹಿರಂಗಪಡಿಸಲಾಗಿಲ್ಲ.
ಮೂಲಗಳ ಪ್ರಕಾರ ಸರ್ಕಾರವು ನೋಟುಗಳನ್ನು ನಿಷೇಧಿಸಿ ನಂತರ ನಿಷೇಧಿತ ನೋಟುಗಳನ್ನು ಬ್ಯಾಂಕ್ ಖಾತೆಗೆ ಠೇವಣಿ ಮಾಡಲು ತಿಳಿಸಲಾಗಿತ್ತು. ಆದರೆ ಈ ಸಮಯದಲ್ಲಿ ಬ್ಯಾಂಕ್ಗಳಲ್ಲಿ ಅನೇಕ ಖಾತೆಗಳಲ್ಲಿ ಠೇವಣಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದಾಖಲೆ ರಹಿತ ಠೇವಣಿಯಾಗಿರುವ ಹಣದ ಮೇಲೆ ತೆರಿಗೆಯನ್ನು ವಿಧಿಸಲು ಸರ್ಕಾರ ಚಿಂತಿಸುತ್ತಿದೆ ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.