ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಪ್ರದೇಶದಲ್ಲಿ ಭಾರತೀಯ ಸೇನಾ ಶಿಬಿರದ ಮೇಲೆ ಮಂಗಳವಾರ ಬೆಳಗ್ಗೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಸೇನೆ ಮತ್ತು ಭಯೋತ್ಪಾದರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.
ಜಮ್ಮುವಿಂದ ಸುಮಾರು 20ಕಿ.ಮೀ ದೂರದ ನಗ್ರೋಟಾ ಸೇನೆಯ 16 ಕಾರ್ಪ್ಸ್, ಭಾರತೀಯ ಸೇನೆಯ ರಚನಾ ಘಟಕದ ಕೇಂದ್ರ ಕಚೇರಿಯಾಗಿದ್ದು, ಶಿಬಿರದ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಓರ್ವ ಮೇಜರ್ ಹಾಗೂ ಯೋಧ ಹುತಾತ್ಮರಾಗಿದ್ದಾರೆ.
ಈ ದಾಳಿಯ ನಂತರ ಸೇನೆಯು ಪ್ರದೇಶದಲ್ಲಿ ಬೇಲಿಯನ್ನು ನಿರ್ಮಿಸಿದ್ದು ಎಲ್ಲ ಶಾಲೆಗಳನ್ನು ಮುಚ್ಚಲಾಗಿದೆ. ಹೆದ್ದಾರಿಗಳಲ್ಲಿ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಮತ್ತೊಂದು ಘಟನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಪ್ರದೇಶದ ರಾಮಗಢದಲ್ಲಿ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರ ಗುಂಪಿನಲ್ಲಿ ಇಬ್ಬರು ಉಗ್ರರನ್ನು ಗಡಿ ಭದ್ರತಾ ಪಡೆಯು ಹತ್ಯೆಗೈದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.