ಬ್ಯಾಂಗ್ಕಾಕ್: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರಮ್ಪ್ರೀತ್ ಕೌರ್ ಅವರ ಆಲ್ರೌಂಡ್ ಪ್ರದರ್ಶನದಿಂದ ಭಾರತ ತಂಡ ಪಾಕಿಸ್ಥಾನದ ವಿರುದ್ಧ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಮಹಿಳೆಯರ ಏಷ್ಯಾ ಕಪ್ T20 ಟೂರ್ನಿಯಲ್ಲಿ ತಾನಾಡಿದ ಎಲ್ಲ ಪಂದ್ಯಗಳನ್ನು ಗೆದ್ದ ಏಕೈಕ ತಂಡವಾಗಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡ, ಪಾಕಿಸ್ಥಾನವನ್ನು ಬ್ಯಾಟಿಂಗ್ಗೆ ಇಳಿಸಿತ್ತು. ಪಾಕ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 97 ರನ್ ಬಾರಿಸಲು ಶಕ್ತವಾಯಿತು.
98 ರನ್ಗಳ ಗುರಿ ಪಡೆದ ಭಾರತ ತಂಡ, ಮಿಥಾಲಿ ರಾಜ್ ಅವರ 36 ಮತ್ತು ಹರಮ್ಪ್ರೀತ್ ಕೌರ್ ಅವರ 26 ರನ್ಗಳ ಸಹಾಯದಿಂದ 3 ಎಸೆತ ಬಾಕಿ ಇರುವಂತೆ ಗುರಿ ತಲುಪಿದೆ.
ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಭಾರತ ಪಾಕ್ ವಿರುದ್ಧ ಆಡುವುದು ಅನುಮಾನವಾಗಿತ್ತು.
ಆಗಸ್ಟ್ 1ರಿಂದ ಅಕ್ಟೋಬರ್ 31ರ ನಡುವೆ ಭಾರತ ತಂಡ ಪಾಕಿಸ್ಥಾನ ವಿರುದ್ಧ ಯಾವೂದೇ ಪಂದ್ಯ ಆಡದೇ ಇದ್ದು, ಐಸಿಸಿ ಭಾರತ ತಂಡದ 6 ಅಂಕಗಳನ್ನು ಕಡಿತಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.