ಅಹ್ಮದಾಬಾದ್: ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದಲ್ಲಿ ಸೋಮವಾರ ಗೆಲುವು ಪಡೆದ ನಂತರ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ನ ಪುರಸಭೆ ಮತ್ತು ಜಿಲ್ಲಾ ಪಂಚಾಯತ್ಗಳಲ್ಲೂ ಭಾರೀ ಗೆಲುವು ಪಡೆದಿದೆ.
ಗುಜರಾತ್ನ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ 126 ಸ್ಥಾನಗಳಲ್ಲಿ ಬಿಜೆಪಿ 107 ಸ್ಥಾನಗಳನ್ನು ಗೆಲ್ಲುವ ಮೂಲಕ 2 ಪುರಸಭೆ ಮತ್ತು 1 ತಾಲೂಕು ಪಂಚಾಯತ್ ಸ್ಥಾನವನ್ನು ಗೆದ್ದುಕೊಂಡಿದೆ.
ಗುಜರಾತ್ ರಾಜ್ಯ ಚುನಾವಣಾ ಆಯೋಗದ ವರದಿ ಪ್ರಕಾರ, ಬಿಜೆಪಿ ವಾಪಿ ಪುರಸಬೆಯ 44 ಸ್ಥಾನಗಳಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡರೆ, ಕನಕಪುರ-ಕಂಸಡ್ ಪುರಸಭೆಯ 28 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದುಕೊಂಡಿದೆ.
ರಾಜ್ಕೋಟ್ನ ಗೋಡಾಲ್ ತಾಲೂಕು ಪಂಚಾಯತ್ನ 22 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಪಕ್ಷ 17 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.
ಅಲ್ಲದೇ 16 ಪುರಸಭೆ ಕ್ಷೇತ್ರಗಳಲ್ಲಿ ಬಿಜೆಪಿ 14 ಕ್ಷೇತ್ರಗಳಲ್ಲಿ ಜಯ ಸಾಧಿಸಿದರೆ ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯ ಕಂಡಿದೆ.
ಬಿಜೆಪಿ ಗೆಲುವಿಗೆ ಪ್ರತಿಕ್ರಿಸಿದ ಪ್ರಧಾನಿ ಮೋದಿ, ಜನರು ರಾಷ್ಟ್ರದ ಸರ್ವತೋಮುಖ ಪ್ರಗತಿ ಬಯಸುತ್ತಿದ್ದು, ಭ್ರಷ್ಟಾಚಾರ ಮತ್ತು ಅನೈತಿಕ ಆಡಳಿತವನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಜಿತು ವಾಘಾನಿ ಮತ್ತಿತರ ಕಾರ್ಯಕರ್ತರಿಗೆ ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಪರಿಶ್ರಮಕ್ಕೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.