ಧಾರವಾಡ: ಧಾರವಾಡದ ಕರ್ನಾಟಕ ಕುಲಪುರೋಹಿತ್ ಆಲೂರು ವೆಂಕಟರಾವ್ ಸಭಾಭವನದಲ್ಲಿ ಡಿಸೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿರುವ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ.ವಿ. ಶ್ರೀಶಾನಂದ ಅವರು ಉದ್ಘಾಟಿಸುವರು.
ಡಿಸೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಲಯದಿಂದ ಏಡ್ಸ್ ಜಾಗೃತಿ ಜಾಥಾ ಆರಂಭವಾಗಲಿದೆ. ಜಿಲ್ಲಾ ಪಂಚಾತ್ ಮುಖ್ಯ ಕಾರ್ಯನಿರ್ವಾಹಕ ಅಧಿಗಾರಿಗಳಾದ ಶ್ರೀಮತಿ ಸುಷ್ಮಾ ಗೋಡಬೊಲೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾತ್ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಕೀಲರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಹುಬ್ಬಳ್ಳಿ-ದಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಪಾಂಡುರಂಗ ಎಚ್. ರಾಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ. ಆರ್ ಎಮ್ ದೊಡ್ಡಮನಿ, ವಕೀಲರ ಸಂಘದ ಅಧ್ಯಕ್ಷರಾದ ಶ್ರೀ. ವಿ.ಡಿ. ಕಾಮರಡ್ಡಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯರು ಹಾಗೂ ನ್ಯಾಯವಾದಿಗಳಾದ ಶ್ರೀಮತಿ ಪ್ರಫುಲ್ಲಾ ಎಸ್. ನಾಯ್ಕ್ ಅವರು ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ. ಯಶವಂತ ಮದನಕರ್ ಅವರು ಉಪನ್ಯಾಸಕರಾಗಿ ಭಾಗವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ. ಎಸ್.ಎನ್. ಹೆಗಡೆ ಅವರು ಸರ್ವರನ್ನು ಸ್ವಾಗತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.