ನವದೆಹಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ನಿವೃತ್ತ ವಾತಯಪಡೆ ಮುಖ್ಯಸ್ಥ ಎಸ್ಪಿ ತ್ಯಾಗಿಯನ್ನು ಕೇಂದ್ರ ತನಿಖಾ ದಳ(ಸಿಬಿಐ) ಶುಕ್ರವಾರ ಬಂಧಿಸಿದೆ. ಸಿಬಿಐ ತ್ಯಾಗಿ ಅವರನ್ನು ಶನಿವಾರ ಕೋರ್ಟ್ಗೆ ಹಾಜರುಪಡಿಸಲಿದೆ.
ವಾಯುಪಡೆ ಮಾಜಿ ಮುಖ್ಯಸ್ಥರೊಬ್ಬರು ಬಂಧನಕೊಳಗಾಗುತ್ತಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು.
ಯುಪಿಎ ಸರ್ಕಾರದ ಅವಧಿಯಲ್ಲಿ 3,767 ಕೋಟಿ ರೂ. ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಎಸ್ಪಿ ತ್ಯಾಗಿ, ಅವರ ಸಂಬಂಧಿ ಸಂಜೀವ್ ತ್ಯಾಗಿ ಮತ್ತು ವಕೀಲ ಗೌತಮ್ ಖೈತಾನ್ರನ್ನು ಅಗಸ್ಟಾ ವೆಸ್ಟ್ಲ್ಯಾಂಡ್ ಕಂಪೆನಿಯಿಂದ 12 AW-101 ವಿವಿಐಪಿ ಹೆಲಿಕಾಪ್ಟರ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ದೆಹಲಿಯ ಸಿಬಿಐ ಕಚೇರಿಗೆ ಕರೆತಂದು ವಿಚಾರಣೆ ಬಳಿಕ ಬಂಧಿಸಲಾಗಿದೆ.
ಅಗಸ್ಟಾ ವೆಸ್ಟ್ಲ್ಯಾಂಡ್ ಖರೀದಿಯ ಒಟ್ಟು ವೆಚ್ಚ 3,767 ಕೋಟಿ ರೂ. ಆಗಿದ್ದು, ಶೇ.12ರಷ್ಟು ಲಂಚ ಪಡೆಯಲಾಗಿತ್ತು. ಎಸ್ಪಿ ತ್ಯಾಗಿ ಮತ್ತಿತರ ಮಧ್ಯವರ್ತಿಗಳು ಮಾರಾಟಗಾರರೊಂದಿಗೆ ಅಕ್ರಮ ವ್ಯವಹಾರ ನಡೆಸಿ ಲಂಚ ಪಡದು ಅಗಸ್ಟಾ ವೆಸ್ಟ್ಲ್ಯಾಂಡ್ ಕಂಪೆನಿಗೆ ಲಾಭ ಒದಗಿಸಲು ಪ್ರಯತ್ನಿಸಿದ್ದರು ಎಂದು ಸಿಬಿಐ ವಕ್ತಾರ ದೇವ್ಪ್ರೀತ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.